ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆಗೆ ದಿನಗಣನೆ ಶುರುವಾಗಿದೆ. ಈ ನಡುವೆ ರಾಮನಗರಿಯಿಂದ ಮಂತ್ರಾಕ್ಷತೆ ವಿತರಣೆ ಕಾರ್ಯವು‌ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸಂಭ್ರಮ, ಸಡಗರದ ವಾತಾವರಣ ಸೃಷ್ಟಿಸಿದೆ. ಬಿಜೆಪಿ ಕಾರ್ಯಕರ್ತರು ಉಲ್ಲಾಸ, ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.
ಶೇಷಾದ್ರಿಪುರಂ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ನೆರವೇರಿಸುವುದರೊಂದಿಗೆ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿ, ಮನೆ ಮನೆಗೆ ತೆರಳಿ ಮಂತ್ರಾಕ್ಷತೆ‌ ವಿತರಿಸಿದರು.
ಜ.22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣಪ್ರತಿಷ್ಠೆಯಾಗಲಿದೆ. ಅದೇ ದಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಸಂಜೆ ಮನೆ ಮುಂದೆ ಉತ್ತರಾಭಿಮುಖವಾಗಿ ಐದು ದೀಪಗಳನ್ನು ಬೆಳಗಿಸುವ ಮೂಲಕ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಕೃತಾರ್ಥರಾಗಬೇಕು ಎಂದು ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.
ಡಾಲರ್ಸ್ ಕಾಲೊನಿಯ ಜಸ್ಟಿಸ್ ಪತ್ರಿ ಬಸನಗೌಡ ಸೇರಿ ಹಲವು ಮನೆಗಳಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿ ಮಂತ್ರಾಕ್ಷತೆ ವಿತರಿಸಿದರು. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಯ ದಿನವಾದ ಜ.22ರಂದು ಪೂಜೆ ಸಲ್ಲಿಸುವಂತೆ ಕೋರಿದರು‌.
ಇದೇ ವೇಳೆ ಬಿಎಸ್ ವೈ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನರೇಂದ್ರ ಮೋದಿ ಆಡಳಿತದಲ್ಲಿ ದೇಶ ರಾಮರಾಜ್ಯವಾಗುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಚಳವಳಿಯಲ್ಲಿ ಕರಸೇವಕನಾಗಿ ಭಾಗವಹಿಸಿದ್ದು ಸುದಿನ. ಇದೀಗ ರಾಮೋತ್ಸವ ನಡೆಯುತ್ತಿದೆ, ಶತಮಾನಗಳ ಭವ್ಯ ರಾಮಮಂದಿರ ನಿರ್ಮಾಣದ ಕನಸು ನನಸಾಗಿದೆ. ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಿಗದಿಯಾಗಿದೆ ಎಂದರು.
ಅಯೋಧ್ಯೆಯ ರಾಮನಗರಿಯಿಂದ ಬಂದಿರುವ ಮಂತ್ರಾಕ್ಷತೆಯನ್ನು ಕರಸೇವಕನಾಗಿ ಮನೆ ಮನೆಗೆ ವಿತರಣೆ ಮಾಡುತ್ತಿರುವುದು ನನ್ನ ಸೌಭಾಗ್ಯ. ಜ.22ರ ಪುಣ್ಯ ವಿಶೇಷ ದಿನದಂದು ಜನರು ಭಕ್ತಿಯಿಂದ ಸೇವೆ ಸಲ್ಲಿಸಿ, ದೇಶ ಹಾಗೂ ರಾಜ್ಯದ ಒಳಿತಿಗೆ ಪ್ರಾರ್ಥಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
