ಹುಬ್ಬಳ್ಳಿ:ರಾಷ್ಟ್ರದ ಗೃಹಸಚಿವರಾಗಿ‌ ಅಮಿತ್​ ಷಾ ಅವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಷಾ ಕಡೆ ನೋಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಪರ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿರುವ ಮಹಾ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಬಿಎಸ್​ವೈ, ಪ್ರತಿಪಕ್ಷಗಳು ಪೌರತ್ವ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿವೆ. ಹೀಗಾಗಿ ಅಮಿತ್​ ಷಾ ನೇತೃತ್ವದಲ್ಲಿ ಜನಜಾಗೃತಿ ಮಾಡುತ್ತಿದ್ದೇವೆ ಎಂದರು.
ಇನ್ನೂ ಕೇವಲ ಮೂರುವರೆ ವರ್ಷ ಮಾತ್ರ ಅಧಿಕಾರದಲ್ಲಿರುತ್ತೇವೆ. ಬಳಿಕ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಅಮಿತ್​ ಷಾ ಹಾಗೂ ಪ್ರಧಾನಿ ಮೋದಿ ಕೈ ಬಲ ಪಡಿಸಬೇಕಿದೆ. ಹುಬ್ಬಳ್ಳಿ ಹೋರಾಟದ ಭೂಮಿಯಾಗಿದೆ. ಎಲ್ಲ ಮೋರ್ಚಾ ಘಟಕಗಳು ಬಲವಾಗಬೇಕಿದೆ. ತನ್ಮೂಲಕ ಪಕ್ಷ ಬಲಗೊಳಿಸುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.
ಇದೇ ವೇಳೆ ರಾಜ್ಯ ಬಜೆಟ್​ ವಿಚಾರವಾಗಿ ಮಾತನಾಡಿ ಮಾ.5ರಂದು ಬಜೆಟ್ ಮಂಡನೆಯಾಗಲಿದೆ. ರೈತಪರ ಹಾಗೂ ಜನಪರ ಬಜೆಟ್ ಮಂಡನೆ ಮಾಡುತ್ತೇವೆ. ರಾಜ್ಯವನ್ನ ಮಾದರಿ ರಾಜ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
