ಶಿವಮೊಗ್ಗ:ಸದ್ಯ ರಾಜ್ಯಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. ಸಂಪುಟ ವಿಸ್ತರಣೆಗಾಗಿ ಪಕ್ಷದೊಳಗೆ ಹಲವರು ಕಾಯುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಮಾತನಾಡಿ, ಹೈಕಮಾಂಡ್​ ಜತೆ ಚರ್ಚಿಸಲು ನಾಳೆ ( ಜ.30) ಬೆಳಗ್ಗೆ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಮತ್ತು ರಮೇಶ್​ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲವೆಂದು ಹೇಳಿದ್ದಾರೆ.
ನಾಳೆ ದೆಹಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್​ ಷಾ ಅವರೊಂದಿಗೆ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಮಾರ್ಚ್​ 5 ರಂದು ಬಜೆಟ್​ ಮಂಡನೆ ಮಾಡುವ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಬಾರಿಯ ಬಜೆಟ್​ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಪ್ರತ್ಯೇಕ ಕೃಷಿ ಬಜೆಟ್​ ಮಾಡಬೇಕು ಎನ್ನುವ ಕೂಗು ಪ್ರತಿ ವರ್ಷದಂತೆ ಈ ವರ್ಷವೂ ಕೇಳಿಬರುತ್ತಿದೆಯಾದರೂ ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಎಸ್​ಡಿಪಿಐ ಮತ್ತು ಪಿಎಫ್​ಐ ನಿಷೇಧ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಿಎಸ್​ವೈ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
