ಬೆಂಗಳೂರು:ಬಿ.ಶ್ರೀರಾಮುಲು ಕೈಯಿಂದ ಆರೋಗ್ಯ ಖಾತೆಯನ್ನಷ್ಟೇ ಹಿಂಪಡೆದು, ಅದಕ್ಕೆ ಬದಲಾಗಿ ಸಮಾಜ ಕಲ್ಯಾಣ ಖಾತೆ ಕೊಡಲಾಗುತ್ತದೆ ಎನ್ನಲಾಗಿತ್ತು. ಇದೀಗ ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆ ಜತೆಗೆ ಹಿಂದುಳಿದ ವರ್ಗಗಳ ಇಲಾಖೆಯನ್ನು ಹಿಂಪಡೆಯುವ ಮೂಲಕ ಉಪ ಮುಖ್ಯಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ.
ಯಡಿಯೂರಪ್ಪ ಅವರು ಇಬ್ಬರ ಖಾತೆಯನ್ನು ದಿಢೀರ್​ ಬದಲಾವಣೆ ಮಾಡಿದ್ದಾರೆ. ಸಚಿವ ಸಂಪುಟ ಪುನರ್​ ವಿಸ್ತರಣೆಗೂ ಮುನ್ನವೇ ಬಿ.ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್​ಗೆ ಕೊಡುವ ಸುದ್ದಿ ತಿಳಿಯುತ್ತಿದ್ದಂತೆಯೇ ಉತ್ತರ ಕರ್ನಾಟಕದ ಹಲವು ಶಾಸಕರು ಸೇರಿದಂತೆ ಸ್ವತಃ ಶ್ರೀರಾಮುಲು ಕೂಡ ಅಸಮಾಧಾನ ಹೊರಹಾಕಿದ್ದರು. ಇದೀಗ ಖಾತೆ ಬದಲಾಣೆ ಮಾಡಿರುವ ಅಧಿಕೃತ ಆದೇಶ ಹೊರಬಿದ್ದಿದ್ದು, ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆ ಜತೆಗೆ ಹಿಂದುಳಿದ ವರ್ಗಗಳ ಖಾತೆಯನ್ನೂ ವಾಪಸ್​ ಪಡೆಯುವ ಮೂಲಕ ಸಿಎಂ ಶಾಕ್​ ಕೊಟ್ಟಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಅವರ ಬಳಿಯಿದ್ದ ಸಮಾಜ ಕಲ್ಯಾಣ ಖಾತೆ ಜವಾಬ್ದಾರಿ ಹೊಣೆಯನ್ನು ಸದ್ಯ ಬಿ.ಶ್ರೀರಾಮುಲುಗೆ ಕೊಟ್ಟಿರುವ ಸಿಎಂ, ಹಿಂದುಳಿದ ವರ್ಗಗಳ ಇಲಾಖೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಡಾ.ಕೆ.ಸುಧಾಕರ್​ಗೆ ವೈದ್ಯಕೀಯ ಶಿಕ್ಷಣದ ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಹೆಚ್ಚುವರಿಯಾಗಿ ಕೊಡಲಾಗಿದೆ.
ಡಿಸಿಎಂ ಗೋವಿಂದ ಕಾರಜೋಳಗೆ ಲೋಕೋಪಯೋಗಿ ಖಾತೆಯನ್ನು ಉಳಿಸಲಾಗಿದೆ. ಖಾತೆ ಮರು ಹಂಚಿಕೆಗೆ ರಾಜ್ಯಪಾಲರಿಂದ ಅಧಿಕೃತ ಅಂಕಿತ ಬಿದ್ದಿದೆ.
ಖಾತೆ ಬದಲಾವಣೆ: ಸ್ಫೋಟಗೊಂಡ ಶ್ರೀರಾಮುಲು ಅಸಮಾಧಾನ

ಹಿಂದು ಎಂಬುದು ಧರ್ಮವೇ ಅಲ್ಲ; ಮತ್ತೊಂದು ವಿವಾದದ ಕಿಡಿ ಹಚ್ಚಿದ ಪ್ರೊ.ಭಗವಾನ್​

ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲ: ಆದಿಚುಂಚನಗಿರಿ ಶ್ರೀಗಳ ಭೇಟಿ ಬಳಿಕ ಡಾ. ಸುಧಾಕರ್ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 8 =
Remember me
