ಬೆಂಗಳೂರು:ಯಾರು ಭಯಬೀಳಬೇಡಿ ನಿಮ್ಮನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಇಟಲಿಯಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು ಇಟಲಿಯ ಮಿಲಾನ್​ ಹಾಗೂ ರೋಮ್​ನಲ್ಲಿ ಇರುವ ಹಾಗೂ ವಿಮಾನ ನಿಲ್ದಾಣಗಳಲ್ಲಿ ಸಿಲುಕಿರುವ ಕನ್ನಡಿಗರು ಹೆದರುವ ಅವಶ್ಯಕತೆ ಇಲ್ಲ. ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಮತ್ತು ವಿದೇಶಾಂಗ ಸಚಿವರಾದ ಎಸ್​. ಜೈಶಂಕರ್​ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆಸಿಕೊಳ್ಳಲಾಗುವುದು ಎಂದು ಹೇಳಿದರು.
ಕನ್ನಡಿಗರನ್ನು ವಿಶೇಷ ವಿಮಾನ ನಿಲ್ದಾಣದ ಮೂಲಕ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಅದರ ಸಿದ್ಧತೆಯ ಬಗ್ಗೆ ಕೇಂದ್ರದ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಯಾರು ಕೂಡ ಭಯ ಬೀಳಬೇಡಿ ಇಡೀ ಕರ್ನಾಟಕ ಸರ್ಕಾರವೇ ನಿಮ್ಮ ಜತೆಗಿದೆ ಎಂದು ಶ್ರೀರಾಮುಲು ಅವರು ಭರವಸೆ ನೀಡಿದರು.
ಇಟಲಿಯ ರೋಮ್ ಹಾಗೂ ಮಿಲನ್ ನಗರದಲ್ಲಿ ಆತಂತ್ರರಾಗಿರುವ ಕನ್ನಡಿಗರು ನನ್ನನು ಸಂಪರ್ಕಿಸಿದ್ದಾರೆ. ನಾನು ಈಗಾಗಲೇ ಕೇಂದ್ರ ಆರೋಗ್ಯ ಮಂತ್ರಿಗಳಾದ ಶ್ರೀ@drharshvardhanಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಇಂದೇ ಅವರನ್ನು ಇಟಲಿಯಿಂದ ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡುವುದಾಗಿ ಆಶ್ವಾಸನೆ ನೀಡಿರುತ್ತಾರೆ.pic.twitter.com/zLT3Dl0Qow
— B Sriramulu (@sriramulubjp)March 12, 2020

ಕರೊನಾ ವೈರಸ್​ ಸೋಂಕು ದಾಳಿಗೆ ತತ್ತರಿಸಿದ ಕುಕ್ಕೋಟದ್ಯಮ: ಮಾಂಸದ ಬೆಲೆಯಲ್ಲಿ ತೀವ್ರ ಕುಸಿತ

ಶಂಕಿತ ಕರೊನಾ ಸೋಂಕಿತ ಸಾಗರದ ಮಹಿಳೆಯ ವೈದ್ಯಕೀಯ ವರದಿಯಲ್ಲಿ ಬಯಲಾಯ್ತು ಈ ಸತ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
