ನವದೆಹಲಿ:ಲೋಕಸಭೆಯ ಚುನಾವಣೆ ಮುಗಿದು ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸೋಮವಾರದಿಂದ ನೂತನ ಲೋಕಸಭೆಯ ಅಧಿವೇಶನ ಆರಂಭವಾಗಿದೆ. ಸಂಪ್ರದಾಯದಂತೆ ರಾಷ್ಟ್ರಪತಿಗಳಿಂದ ನೇಮಕಗೊಂಡಿರುವ ಹಂಗಾಮಿ ಸ್ಪೀಕರ್ ಮೊದಲೆರಡು ದಿವಸ ನೂತನ ಸಂಸದರಿಗೆ ಪ್ರಮಾಣ ವಚನ ಬೋದಿಸಲಿದ್ದಾರೆ. ನಂತರ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಹಾಗೂ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ನಡೆಯಲಿದೆ.
ಸೋಮವಾರ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಕರ್ನಾಟಕದ ಬಹುತೇಕ ಸಂಸದರು ಕನ್ನಡದಲ್ಲಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಿ ಗಮನ ಸೆಳೆದರು. ಅದರಲ್ಲಿ ವಿಶೇಷವಾಗಿ ಶಿವಮೊಗ್ಗ ಲೋಕಸಭೆಯ ಸಂಸದರಾದ ಬಿ. ವೈ. ರಾಘವೇಂದ್ರ ಅವರು ನಾಲ್ಕನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದು, 18ನೇ ಲೋಕಸಭೆಯ ಸದಸ್ಯರಾಗಿ ಶಿವಮೊಗ್ಗ ಕ್ಷೇತ್ರದ ಮತದಾರರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಸಾಮಾನ್ಯವಾಗಿ ಸಂಸದರು ಅಥವಾ ಜನಪ್ರತಿನಿಧಿಗಳು ದೇವರು ಹೆಸರಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸುತ್ತಾರೆ. ಆದರೆ ಮತದಾರರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಬಿ.ವೈ.ರಾಘವೇಂದ್ರ ಅವರು ತಮ್ಮ ಕ್ಷೇತ್ರದ ಜನರೇ ತಮ್ಮ ಪಾಲಿಗೆ ದೇವರು ಎಂಬುದನ್ನು ಸಾರಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 − 8 =
Remember me
