ಬೆಂಗಳೂರು:ರಾಜ್ಯ ಬಿಜೆಪಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
ರಾಜ್ಯಾಧ್ಯಕ್ಷ ಹಾಗೂ ವಿರೋಧಪಕ್ಷದ ನಾಯಕರ ನೇಮಕ ವಿಚಾರದಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಈ ಮೂಲಕ ಟೀಕೆಗೆ ಗುರಿಯಾಗುತ್ತಿದ್ದ ಒಂದು ವಿಚಾರವನ್ನು ಸಮರ್ಥವಾಗಿ ನಿಭಾಯಿಸಿದಂತಾಗಿದೆ.
ಪಕ್ಷದ ಉಪಾಧ್ಯಕ್ಷರಾಗಿ ಈಗಾಗಲೇ ಛಾಪು ಮೂಡಿಸಿ, ಪಕ್ಷದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಬಿ.ವೈ.ವಿಜಯೇಂದ್ರ ಅವರ ಈ ನೇಮಕ ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರಲು ಪೂರಕವಾಗಲಿದೆ ಎನ್ನಲಾಗುತ್ತಿದೆ.

(ಈ ಸಂಬಂಧ ಇನ್ನಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ)
ಉದ್ಯೋಗ ಬದಲಿಸುವ ಮುನ್ನ ಇರಲಿ ಎಚ್ಚರ: ಕೆಲಸಕ್ಕೆ ಸೇರುವ ಮುನ್ನವೇ 24 ಲಕ್ಷ ರೂ. ಕಳ್ಕೊಂಡ ಇಂಜಿನಿಯರ್!

ಚುನಾವಣಾ ಕ್ಯಾಂಪೇನ್ ವಾಹನದ ಮೇಲಿಂದ ಮುಗ್ಗರಿಸಿಬಿದ್ರು ಸಚಿವ, ಸಂಸದ, ಶಾಸಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + 18 =
Remember me
