–ಕಾಂಗ್ರೆಸ್​ಗೆ ವಿಜಯೇಂದ್ರ ತಿರುಗೇಟು
ಬೆಂಗಳೂರು:ಐದು ಗ್ಯಾರಂಟಿಗಳ ಜತೆಗೆ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಜನರು ರೊಚ್ಚಿಗೆದ್ದು ಬಡಿಗೆ ಹಿಡಿಯುತ್ತಾರೆ. ಧಮ್ಮು, ತಾಕತ್ತು ತೋರಿಸಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಬಹುಮತ ಲಭಿಸದೆ ಮನಸ್ಸಿಗೆ ಬಂದಂತೆ ಆಡಳಿತ ನಡೆಸುತ್ತೇವೆ ಎನ್ನುವುದು ಕಾಂಗ್ರೆಸ್​ನ ಧೋರಣೆಯಾಗಿದೆ ಎಂದು ಟೀಕಿಸಿದ್ದಾರೆ.
ಚುನಾವಣೆಯಲ್ಲಿ ವೋಟು ಪಡೆಯುವುದಕ್ಕಾಗಿ ಐದು ಗ್ಯಾರಂಟಿಗಳ ಬಗ್ಗೆ ಮನಸೋಇಚ್ಛೆ ಭರವಸೆ ನೀಡಿದರು. ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿದು ಎಲ್ಲರಿಗೂ ಉಚಿತವಾಗಿ ಕೆಲವು ಯೋಜನೆ ನೀಡುತ್ತೇವೆ ಎಂದರು. ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳು ಈಡೇರಿಸುವುದು ಅಸಾಧ್ಯವೆಂದು ಮುಖ್ಯಮಂತ್ರಿಗಳು ಹಾಗೂ ಎಲ್ಲ ಸಚಿವರಿಗೆ ಅರ್ಥವಾಗಿದೆ ಎಂದು ಕಾಂಗ್ರೆಸ್​​ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಹೀಗಾಗಿ ವಿಷಯಾಂತರ ಮಾಡಲು ಬಿಜೆಪಿ ಆಡಳಿತಾವಧಿಯ ಕಾಯ್ದೆಗಳನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡಿದ್ದು, ಈ ತೀರ್ಮಾನಗಳ ವಿರುದ್ಧ ಬಿಜೆಪಿ ಸದನದ ಹೊರ-ಒಳಗೆ ಪ್ರಬಲ ಹೋರಾಟ ನಡೆಸಲಿದೆ ಎಂದು ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.
ಸ್ನೇಹಿತನಿಗೆ 52 ಲಕ್ಷ ರೂ. ಮೌಲ್ಯದ ದುಬಾರಿ ಕಾರು ಗಿಫ್ಟ್ ಕೊಟ್ಟ ಧ್ರುವ ಸರ್ಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
