ಬೆಂಗಳೂರು:ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳ ಡೌನ್​ಲೋಡ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್‌ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡುವವರಿಂದಲೇ ಖುರ್ಚಿ ಮೇಲೆ ಕಣ್ಣು: ಕೆ.ಎಸ್‌.ಈಶ್ವರಪ್ಪ ವ್ಯಂಗ್ಯ
ಎಕ್ಸ್​ ಖಾತೆ ಮೂಲಕ ಈ ವಿಷಯ ಪ್ರಸ್ತಾಪಿಸಿದ ಅವರು, ಇದೇ 5 ರಂದೇ ಪ್ರವೇಶ ಪತ್ರವನ್ನು ಡೌನ್​ಲೋಡ್​ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದಿದ್ದು, ಡೌನ್​ಲೋಡ್ ಪ್ರಕ್ರಿಯೆ ತಡೆದಿರುವುದು ಸರ್ಕಾರದ ಕಾರ್ಯವೈಖರಿಗೆ ಕೈಗನ್ನಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಎಸ್ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 22ರಂದು ಯುಪಿಎಸ್ಸಿ ಹಾಗೂ ಎಸ್​ಎಸ್​ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ ಎಂದು ಹರಿಹಾಯ್ದಿದ್ದಾರೆ.
ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರವಹಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಚೀನಾಗಿಂತ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು: ರಾಹುಲ್‌ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
