ಬೆಂಗಳೂರು:ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ಎನ್ನುವ ಮೂಲಕ ಶಿಕಾರಿಪುರದ ಬಿಜೆಪಿ ಶಾಸಕ ಬಿ.ವೈ​. ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ.
ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ. ವರುಣನ ಅವಕೃಪೆ ಇಡೀ ರಾಜ್ಯವನ್ನು ಆವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರಿಸಿರುವ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ, ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ವಿಜಯೇಂದ್ರ ಅವರು ಟ್ವೀಟ್​ ಮಾಡಿದ್ದಾರೆ.
ಇದನ್ನೂ ಓದಿ:ಸಲುಗೆ ಬೆಳೆಸಿ ಕೋಟಿ ಲೂಟಿ! ಅರಕಲಗೂಡು SBI ಗುತ್ತಿಗೆ ನೌಕರನ ನಕಲಿ ಚಿನ್ನದ ಮುಖವಾಡ ಬಯಲು
ಅಂದಹಾಗೆ ಆರಂಭದಲ್ಲೇ ಮಾನ್ಸೂನ್ ದುರ್ಬಲಗೊಂಡ ಪರಿಣಾಮ ಪ್ರಸಕ್ತ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಜೂ 1ರಿಂದ ಜೂ 18ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 109 ಮಿಮೀ ಮಳೆ ಆಗಬೇಕಿತ್ತು. ಆದರೆ, 32 ಮಿಮೀ ಮಳೆಯಾಗಿದ್ದು, ಶೇ.71 ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಮೂರ್ನಾಲ್ಕು ವರ್ಷಗಳಿಂದ ಮಳೆ ದಿನಗಳು ಬದಲಾಗುತ್ತಿರುವ ಕಾರಣ 2020 ಮತ್ತು 2022ರ ಜೂನ್‌ನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ.
2021ರ ಜೂನ್‌ನಲ್ಲಿ ಮಾತ್ರ ವಾಡಿಕೆಯಷ್ಟೇ ಮಳೆ ಸುರಿದಿದೆ. ಆದರೆ, ಮೂರು ವರ್ಷಗಳಿಂದಲೂ ಕರಾವಳಿ,ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ ಸುರಿದಿದ್ದರೂ ಸರಿಯಾಗಿ ಸಮಯಕ್ಕೆ ಮಳೆ ಬರದಂತಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗ್ಳೂರಲ್ಲಿ ಕುಡಿದ ಮತ್ತಲ್ಲಿ ಯುವಕ-ಯುವತಿಯರ ಜಾಲಿ ರೈಡ್: ಅತೀ ವೇಗದ ಹುಚ್ಚಾಟಕ್ಕೆ ಅಮಾಯಕನ ಬಲಿ

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 1 ವಾರದಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾಗಿದ್ದೆಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
