ಬಳ್ಳಾರಿ:ಕಾಂಗ್ರೆಸ್​ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಕರೊನಾ ಪರೀಕ್ಷೆ ನಡೆಸುವ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅವರು ಸುಳಿವು ನೀಡಿದ್ದಾರೆ.
ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೀಘ್ರದಲ್ಲೇ ಜಮೀರ್ ಅವರ್​ ಕ್ವಾರಂಟೈನ್​​ಗೆ ಹೋಗಲಿದ್ದಾರೆ. ಈಗಾಗಲೇ ಗೃಹ ಸಚಿವರು ಕೂಡ ಚರ್ಚೆ ಮಾಡಿ ಕ್ವಾರಂಟೈನ್​ಗೆ ಕಳುಹಿಸಬೇಕೆಂದು ಹೇಳಿಕೆ ನೀಡಿದ್ದಾರೆ.
ಒಂದು ಸಾವು ಆದಾಗ ಜಮೀರ್​ ಅವರು ಅಂತಿಮ ಸಂಸ್ಕಾರಕ್ಕೆ ಹೊಗಿದ್ದರು. ಹೀಗಾಗಿ ಜಮೀರ್​ ಅವರನ್ನು ಕ್ವಾರಂಟೈನ್ ಮಾಡಲಾಗುವುದು. ಕ್ವಾರಂಟೈನ್ ಆದ ಮೇಲೆ ನಿಯಮದ ಪ್ರಕಾರ ಎಲ್ಲ ಟೆಸ್ಟ್ ಮಾಡಲಾಗುವುದು. ಏನೆಂಬುದು ಆನಂತರ ಗೊತ್ತಾಗಲಿದೆ ಎಂದರು.
ತನಿಖಾ ವರದಿ ಬಂದ ನಂತರಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಸಹ ಮಾತನಾಡಿ, ಜಮೀರ್​ ಅವರನ್ನು ಕ್ವಾರಂಟೈನ್ ಮಾಡುವ ಬಗ್ಗೆ ಪಾದರಾಯನಪುರದ ಗಲಾಟೆ ಪ್ರಕರಣದ ತನಿಖಾ ವರದಿ ಬಂದ ನಂತರ ನಿರ್ಧಾರ ಮಾಡಲಾಗುವುದು. ಜನರು ಸಹಕಾರ ನೀಡಬೇಕು. ಇಲ್ಲದಿದ್ದರೆ ಕಠಿಣ‌ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.(ದಿಗ್ವಿಜಯ ನ್ಯೂಸ್​)
ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದು ಭಾವಿಸಿರಲಿಲ್ಲ: ಸ್ವಜನರ ವಿರುದ್ಧವೇ ತಿರುಗಿತು ಜಮೀರ್ ಅಸಮಾಧಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
