ಬೆಂಗಳೂರು: ಪಾದರಾಯಪುರ ಗಲಭೆ ಮತ್ತು ನಂತರದ ಬೆಳವಣಿಗೆಯಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡು ಗಮನಸೆಳೆಯುತ್ತಿದ್ದಾರೆ. ರಾಜಕೀಯ ಪಿತೂರಿ ಎಂದೆಲ್ಲ ಟ್ವೀಟ್ ಮಾಡಿ ನಂತರ ನನ್ನ ಪಿಎ ಮಾಡಿದ್ದು ಎಂದು ಹೇಳಿಕೊಂಡಿದ್ದ ಜಮೀರ್ ಇಂದು ಮತ್ತೆ ಸರಣಿ ಟ್ವೀಟ್ ಮೂಲಕ ಗಮನಸೆಳೆದಿದ್ದಾರೆ.
ನಿನ್ನೆಯವರೆಗೂ ನಮ್ಮವರು ಎಂದು ಸ್ವಕ್ಷೇತ್ರದ ಜನರನ್ನು ಸಮರ್ಥಿಸಿಕೊಳ್ಳುತ್ತ ಬಂದಿದ್ದ ಶಾಸಕ ಜಮೀರ್ ಅಹಮದ್ ಖಾನ್ ಇಂದು ಮಾಡಿರುವ ಸರಣಿ ಟ್ವೀಟ್​ನಲ್ಲಿ ಸ್ವಜನರ ವಿರುದ್ಧವೇ ಅಸಮಾಧಾನ ಕಾರಿದ್ದಾರೆ. ಗಲಭೆ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಎಂದು ಬಣ್ಣಿಸಿರುವ ಅವರು ನನ್ನ ಜನರೇ ಈ ರೀತಿ ವರ್ತಿಸುತ್ತಾರೆ ಎಂದು ಭಾವಿಸಿರಲಿಲ್ಲ ಎಂದು ಸ್ವಜನರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಸರಣಿ ಟ್ವೀಟ್​ನಲ್ಲಿ ಹೇಳಿದ್ದೇನು-
“ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ.ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ.ಲಾಕ್‌ಡೌನ್ ಪ್ರಾರಂಭವಾದ ದಿನದಿಂದ ಹಿಡಿದು ನಿನ್ನೆಯ ಸಂಜೆಯವರೆಗೂ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ, ಜನರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಂಡಿದ್ದು ನಗರದಲ್ಲಿ‌ಕೊರೊನಾ ನಿಯಂತ್ರಣಕ್ಕೆ ಬರಬೇಕೆಂದು.ಆದರೆ ನಿನ್ನೆಯ ಘಟನೆ ನಡೆಯಬಾರದಿತ್ತು, ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ‌ಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ.ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದು ಭಾವಿಸಿರಲಿಲ್ಲ. ಯಾರೋ‌ ಒಂದಷ್ಟು ಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಕೂಡ ಸರಿಯಲ್ಲ. ಧರ್ಮಾತೀತವಾಗಿ ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ, ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ.ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ.ಈ ಘಟನೆ ಸಂಭವಿಸದಂತೆ ಕೈಗೊಳ್ಳಬಹುದಾಗಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಾನು ಆಡಿದ ಮಾತುಗಳಿಗೆ ಬೇರೆಯದೇ ಅರ್ಥ ನೀಡಿ ಕೆಲ ಸಚಿವರು ನನ್ನ ವಿರುದ್ಧ ಏನೇನು ಪದಗಳನ್ನು ಬಳಸಬಹುದೋ ಅವೆಲ್ಲವನ್ನೂ ಬಳಸಿ ನನ್ನನ್ನು ಹಾಡಿ ಹೊಗಳಿದ್ದಾರೆ, ಸಂತೋಷವಾಗಿದೆ. ಅವರಿಗೂ ಧನ್ಯವಾದ.ನಾನು ಏನು ಹೇಳಲು ಬಯಸಿದ್ದೆ ಅದನ್ನು ಹೇಳಲು ಎಲ್ಲಿಯೂ ನನಗೆ ಅವಕಾಶ ಸಿಗಲಿಲ್ಲ. ಹಿಂದೂ ಮುಸ್ಲಿಂ ಇರಲಿ ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶವನ್ನು, ರಾಜ್ಯವನ್ನು ಕೊರೊನಾದಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ.ಆ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ.ಮುಂದೆ ಇಂಥ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕರೊನಾ ನಿರ್ಮೂಲನೆಯೊಂದೇ ಆಗಿರಲಿ”ಎಂದು ಜಮೀರ್​ ಟ್ವೀಟ್​ಗಳಲ್ಲಿ ಹೇಳಿಕೊಂಡಿದ್ದಾರೆ.
ಪಾದರಾಯನಪುರ ಗಲಭೆ ರಾಜಕೀಯ ಪಿತೂರಿ ಎಂದು ಟ್ವೀಟ್ ಮಾಡಿದ್ರು ಶಾಸಕ ಜಮೀರ್ ಅಹಮದ್​ ಖಾನ್​!

ಕರೊನಾ ವಾರಿಯರ್ಸ್ ವಿರುದ್ಧ ಪಾದರಾಯನಪುರ ನಿವಾಸಿಗಳ ಗಲಾಟೆ: 50ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್​ಗೆ ಕರೆದೊಯ್ಯುವಾಗ ಪುಂಡಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + four =
Remember me
