ಚಿಕ್ಕಬಳ್ಳಾಪುರ:ಬಿಜೆಪಿಯಲ್ಲಿ ನನ್ನನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಶಿಷ್ಟಾಚಾರಕ್ಕೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ನನ್ನ ಹೆಸರು ಹಾಕುತ್ತಿದ್ದರು ಆದರೆ, ಪಕ್ಷದ ಸಭೆಗಳಿಗೆ ಆಹ್ವಾನಿಸುತ್ತಿರಲಿಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ.ಎನ್. ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಸಂಸದರು 75 ವರ್ಷ ದಾಟಿದವರಿಗೆ ಟಿಕೆಟ್​ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ, ರಾಜಕೀಯದಲ್ಲಿ ಸಕ್ರಿಯನಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾಗಿದ್ದವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಡಾ.ಕೆ. ಸುಧಾಕರ್​ ಹಾಗೂ ಎಂ.ಟಿ.ಬಿ ನಾಗರಾಜ್​ ನನ್ನನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರಕ್ಕೆ ನನ್ನ ಹೆಸರನ್ನು ಹಾಕಲಾಗುತ್ತಿತ್ತು. ಆದರೆ, ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತಿರಲಿಲ್ಲ.
ಇದನ್ನೂ ಓದಿ:ಪಾಕಿಸ್ತಾನದ ಪ್ರಜೆಗಳು ಭಾರತದ ಪಾಲಿನ ಅತಿದೊಡ್ಡ ಆಸ್ತಿ: ಮಣಿಶಂಕರ್​ ಅಯ್ಯರ್​
ನನ್ನ ಮಗ ಶರತ್​ ಕಾಂಗ್ರೆಸ್​ನಿಂದ ಗೆದ್ದು ಶಾಸಕನಾಗಿದ್ದಾನೆ. ನಾನು ಬಿಜೆಪಿಯಲ್ಲೇ ಇದ್ದೇನೆ. ಸಮಯ ಬಂದಾಗ ನನ್ನ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ. ಚುನಾವಣೆ ನಡೆದು ಮೂರು ತಿಂಗಳು ಕಳೆದರೂ ಬಿಜೆಪಿ ಹೈಕಮಾಂಡ್​ ವಿಪಕ್ಷ ನಾಯಕ ಹಾಗೂ ರಾಜ್ಯಾದ್ಯಕ್ಷನನ್ನು ಆಯ್ಕೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿದೆ. ಇದದಿಂದ ಪಕ್ಷದ ನಾಯಕರಿಗೆ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳಲು ಸಾಧ್ತವಾಗುತ್ತಿಲ್ಲ.
ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡುವ ವಿಚಾರವಾಗಿ ರಾಜ್ಯ ಸರ್ಕಾರ ದುಡ್ಡು ನೀಡುತ್ತೇವೆ ಎಂದು ಹೇಳಿದರು ಕೇಂದ್ರ ಸರ್ಕಾರ ಸ್ಟಾಕ್​ ಇದ್ದರೂ ಅಕ್ಕಿ ಕೊಡದಿರುವುದು ತಪ್ಪು. ಲೋಕಸಭೆ ಚುನಾವಣೆಗೆ ಇನ್ನು ಆರೇಳು ತಿಂಗಳು ಬಾಕಿ ಇದೆ ನರೇಂದ್ರ ಮೋದಿ ಅವರೇ ಮತ್ತೆ ಅಧಿಕಾರಕ್ಕೆ ಬರುತ್ತಾರ ಅಥವಾ ಬೇರೆಯವರು ಬರುತ್ತಾರೊ ಎಂದು ಈಗಲೇ ಹೇಳಲು ಸಾಧ್ಯವಿಲ್ಲ.
ಗ್ಯಾರಂಟಿ ಯೋಜನೆಗಳ ಕುರಿತ ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 13 ಬಾರಿ ಹಣಕಾಸು ಸಚಿವರಾಗಿ ಬಜೆಟ್​ ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಬುದ್ದಿವಂತಿಕೆ ಅವರಿಗಿದೆ. ಗ್ಯಾರಂಟಿ ಯೋಜನೆಗಳಿಗೆ ಯಾವ ರೀತಿ ಹಣ ಒದಗಿಸಬೇಕು ಎಂದು ಎನ್ನುವುದು ಅವರಿಗೆ ಚೆನ್ನಾಗಿಯೇ ಗೊತ್ತಿದೆ. ಈ ಯೋಜನೆಗಳಿಂದ ರಾಜ್ಯದ ಜನತೆಗೆ ಅನುಕೂಲವಾಗುತ್ತದೆ ಎಂದು ಚಿಕ್ಕಬಳ್ಳಾಪುರದ ಸಂಸದ ಬಿ.ಎನ್​. ಬಚ್ಚೇಗೌಡ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
