ಬೆಂಗಳೂರು:ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ಟಿಕೆಟ್ ಘೋಷಣೆ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಕೆ.ಎಚ್‌.ಮುನಿಯಪ್ಪಗೆ ಟಿಕೆಟ್ ನೀಡದಂತೆ ಕಾಂಗ್ರೆಸ್​​ ಮುಖಂಡರ ಒತ್ತಾಯ ಮಾಡುವುದರ ಜತೆಗೆ ದೇವನಹಳ್ಳಿ ಕಾಂಗ್ರೆಸ್​ನಿಂದ ಸಾಮೂಹಿಕ ರಾಜೀನಾಮೆ ಪರ್ವ ಶುರುವಾಗಿದೆ.
ದೇವನಹಳ್ಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರೆಲ್ಲರೂ ಸೇರಿ ಒಮ್ಮತದಿಂದ ಈ ನಿರ್ಧಾರಕ್ಕೆ ಬಂದಿದ್ದು, ಸಾಮೂಹಿಕ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ಕೈ ನಾಯಕರಿಗೆ ರವಾನೆ ಮಾಡಿದ್ದಾರೆ.
ಇದನ್ನೂ ಓದಿ:ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು; ಆನಂದ್ ಸಿಂಗ್ಕೆ.ಎಚ್ ಮುನಿಯಪ್ಪಗೆ ಟಿಕೆಟ್​ ನೀಡಿದಲ್ಲಿ ಕ್ಷೇತ್ರದಲ್ಲಿ ಪಕ್ಷ ಸೋಲುತ್ತದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಸ್ಥಳೀಯರಿಗೆ ನೀಡುವಂತೆ ಸ್ಥಳೀಯ ಮುಖಂಡರು ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಪುರಸಭೆ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರಿಂದ ಒಮ್ಮತದ ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ:ಬಿಯರ್ ಮೇಲೆ 10 ರೂ. ಹೆಚ್ಚುವರಿ ವಸೂಲಿ ಮಾಡಿದ್ದವನಿಗೆ ಜೈಲು; ಬಾರ್ ಲೈಸೆನ್ಸ್ ಹೊಂದಿದ್ದ ಮಾಲೀಕನಿಗೆ 75,000 ರೂ. ದಂಡಕೆಹೆಚ್​​ಗೆ ಟಿಕೆಟ್​ ನೀಡಿದ್ದಲ್ಲಿ ಎಡಗೈ ಸಮುದಾಯದ‌ ಮತ ಚದುರುವ ಸಾಧ್ಯತೆ ಹಿನ್ನೆಲೆ ಇದೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದೆ ಟಿಕೆಟ್​​ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಳೆದ ಹಲವು ವರ್ಷಗಳಿಂದ ಸ್ಥಳೀಯರು ಟಿಕೆಟ್​​ ಆಕಾಂಕ್ಷಿಗಳಾಗಿ ಕೆಲಸ ಮಾಡಿದ್ದು, ಅವರಿಗೆ ಟಿಕೆಟ್​​ ನೀಡುವಂತೆ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್; ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ.. ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
