ಹಾವೇರಿ:ಬ್ಯಾಡಗಿ ಶಾಸಕ ವಿರೂಪಾಕ್ಷ ಬಳ್ಳಾರಿ ಅವರ ಪುತ್ರ ಯುವರಾಜ್ ಚಾಲನೆ ಮಾಡುತ್ತಿದ್ದ ಕಾರು ಹಿಂಬದಿಯಿಂದ ಸಾರಿಗೆ ಬಸ್​ಗೆ ಡಿಕ್ಕಿಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದೆ.
ಬುಧವಾರ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಕಾರಿನಲ್ಲಿ ಯುವರಾಜ್ ಬರುತ್ತಿದ್ದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣ ಹೊರಹೊಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಬಸ್​ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಕಾರಿನ ಮುಂಭಾಗ ಮತ್ತು ಬಸ್ ಹಿಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯುವರಾಜ್ ಬಳ್ಳಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಶಿಗ್ಗಾವಿ ಪೊಲೀಸರು ಕಾರು ಮತ್ತು ಬಸ್ಸನ್ನು ವಶಕ್ಕೆ ಪಡೆದು ಠಾಣೆಗೆ ತಂದಿದ್ದಾರೆ.
ಶಾಸಕರ ಪುತ್ರನ ಮೇಲೆ ಕೆಎಸ್​ಆರ್​ಟಿಸಿ ಸಿಬ್ಬಂದಿ ದೂರು ನೀಡಿದ್ದಾರೆ. ಘಟನೆಗೆ ಅತೀ ವೇಗ ಮತ್ತು ನಿರ್ಲಕ್ಷ್ಯತನದ ಚಾಲನೆಯೇ ಕಾರಣ ಎಂದು ತಿಳಿದು ಬಂದಿದೆ. ಆರೋಪಿ ಯುವರಾಜ್​ರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
3 ಕೋಟಿ ಖರ್ಚು ಮಾಡಿಸಿ ಮದ್ವೆಯಾದವ ಮೊದಲ ರಾತ್ರಿಯೇ ಫುಲ್ ಟೈಟ್! ಮುಂದೆ ಆಗಿದ್ದೆಲ್ಲವೂ…

ತಾಯಿಯನ್ನು ಬಲಿ ಪಡೆದಿದ್ದ ಉಮಾಶ್ರೀ ಕಾರಿಗೆ ಮಗಳ ಜೀವವೂ ಹೋಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 6 =
Remember me
