ಬಾಗಲಕೋಟೆ:ರಾಜ್ಯದಲ್ಲಿ ಯುಗಾದಿ ಹಬ್ಬದ ಸಂಭ್ರಮಾಚರಣೆ ಅದ್ದೂರಿಯಾಗಿ ಸಾಗುತ್ತಿದ್ದು, ಈ ಮಧ್ಯೆ ಬಾಗಲಕೋಟೆ ಲೋಕಸಭಾ ಅಭ್ಯರ್ಥಿಗಳಾದ ಪಿ.ಸಿ.ಗದ್ದಿಗೌಡರ ಮತ್ತು ಸಂಯುಕ್ತಾ ಪಾಟೀಲ್​ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಟೋತ್ಸವದಲ್ಲಿ ಮುಖಾಮುಖಿಯಾಗಿದ್ದಾರೆ.
ಇದನ್ನೂ ಓದಿ:ಹೊಸ ವರ್ಷದ ಹೊಸ ಹರ್ಷ; ಯುಗಾದಿಯ ಬೇವು, ಬೆಲ್ಲದ ಸವಿಯಲ್ಲಿ ತಾರೆಯರು
ಮಹಾಲಿಂಗೇಶ್ವರ ಜಟಾ ದರ್ಶನಕ್ಕೆ ಸಾವಿರಾರು ಭಕ್ತರು ಭಾಗಿಯಾಗಿದ್ದು, ಈ ವೇಳೆ ದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ಕಾಂಗ್ರೆಸ್​ ಅಭ್ಯರ್ಥಿ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ್​ ಪರಸ್ಪರ ಮುಖಾಮುಖಿಯಾದರು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದ ಮಹಾಲಿಂಗೇಶ್ವರ ಮಠದಲ್ಲಿ ಜಟಾ ಪೂಜೆ ನಡೆಯುತ್ತದೆ. ಜಟಾ ದರ್ಶನ ಪಡೆದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಲವು ವರ್ಷಗಳಿಂದ ಯುಗಾದಿ ಪಾಡ್ಯದಂದು ಸಂಸದ ಪಿ.ಸಿ.ಗದ್ದಿಗೌಡರ ತಪ್ಪದೇ ಜಟಾ ದರ್ಶನ ಪಡೆಯುತ್ತಾರೆ. ಈ ವರ್ಷ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಂಯುಕ್ತ ಪಾಟೀಲ ಸಹ ಜಟಾ ಪೂಜೆಯಲ್ಲಿ ಭಾಗಿಯಾದರು.
ಇದನ್ನೂ ಓದಿ:ನಾಗೇಂದ್ರ ಪ್ರಸಾದ್ ಯುಗಾದಿ ಗೀತೆ; ಕೃಷ್ಣಾವತಾರ ಹಾಡನ್ನು ರಿಲೀಸ್ ಮಾಡಿದ ಯದುವೀರ್ ಒಡೆಯರ್
ನಸುಕಿನ ಜಾವ 5 ಗಂಟೆಗೆ ಆರಂಭವಾದ ಜಟಾ ಪೂಜೆಯಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ದರ್ಶನ ಪಡೆಯಲು ವಿವಿಧೆಡೆಯಿಂದ ಭಕ್ತ ಸಾಗರ ಹರಿದುಬರುತ್ತಿದೆ.
ಯುಗಾದಿ ಹಬ್ಬದಂದು ತಪ್ಪದೇ ಈ ಕೆಲಸಗಳನ್ನು ಮಾಡಿ! ನಿಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × three =
Remember me
