ಬಾಗಲಕೋಟೆ:ಅಪ್ರಾಪ್ತೆ ಹಾಗೂ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ.
ಆನಂದ (23) ಮತ್ತು 15 ವರ್ಷದ ಬಾಲಕಿ ಮೃತ ದುರ್ದೈವಿಗಳು. ಆನಂದ ವಾಸವಿದ್ದ ಬಸವ ನಗರದ ಬಾಡಿಗೆ ರೂಮಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಆನಂದ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ:ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಯುವಕನ ದಾರುಣ ಸಾವು
ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಮುಧೋಳ ತಾಲ್ಲೂಕಿನ ಒಂದೇ ಗ್ರಾಮದವರು. ಇದೀಗ ಆತ್ಮಹತ್ಯೆಗೆ ಶರಣಾಗಿರುವುದು ಇಬ್ಬರ ಕುಟುಂಬಕ್ಕೂ ಆಘಾತವಾಗಿದೆ. ಆದರೆ, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸಾಯುವ ಮುನ್ನ ಯುವಕ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಾಕಿದ್ದು, ಆಲ್ ಫ್ರೆಂಡ್ಸ್​ ಮಿಸ್ ಯು, ಅವ್ವ-ಅಪ್ಪ ಮಿಸ್ ಯು ಎಂದು ಬರೆದುಕೊಂಡಿದ್ದಾನೆ. ಸ್ಥಳಕ್ಕೆ ಮುಧೋಳ‌ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಅತ್ಯಾಚಾರಗಳು ನಿಲ್ಲಬೇಕಾದ್ರೆ ಹೀಗೆ ಮಾಡಿ: ಸಲಹೆ ನೀಡಿ ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
