ಬಾಗಲಕೋಟೆ:ಟಂಟಂ ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ತಲೆ, ಕುತ್ತಿಗೆ ಹಾಗೂ ಬೆನ್ನಿನ ಭಾಗದಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ನೀರಲಕೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಇದನ್ನೂ ಓದಿ:ಚನ್ನರಾಯಪಟ್ಟಣ ಎಸ್​ಐ ಆತ್ಮಹತ್ಯೆ ಪ್ರಕರಣ: ಸ್ಟೋಟಕ ಹೇಳಿಕೆ ನೀಡಿದ ಮಾಜಿ ಸಚಿವ ಎಚ್​.ಡಿ. ರೇವಣ್ಣ
ರಂಗಪ್ಪ ಚಂದ್ರಶೇಖರ ದಳವಾಯಿ(22) ಕೊಲೆಯಾದ ಟಂಟಂ ಚಾಲಕ. ಮೊನ್ನೆ (ಗುರುವಾರ) ರಾತ್ರಿ ಕೊಲೆ ನಡೆದಿದ್ದು, ಸದ್ಯ ಗ್ರಾಮದ ಹೊರವಲಯದ ಮೃತದೇಹ ‌ಕಂಡುಬಂದಿದೆ.
ಮೊನ್ನೆ ರಾತ್ರಿ ಗ್ರಾಮದ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ನೇಹಿತ ಕೃಷ್ಣ ಗೌಡರರ್​ ಎಂಬಾತನ ಹುಟ್ಟುಹಬ್ಬ ಆಚರಿಸಿದ್ದರು. ಬಳಿಕ ಮನೆಗೆ ಹೋಗೋದಾಗಿ ಸ್ನೇಹಿತರ ಬಳಿ ಹೇಳಿದ್ದ. ಆದರೆ, ಕೆಲವೇ ಕ್ಷಣಗಳಲ್ಲಿ ಚಾಲಕನ ಕೊಲೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ:ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧ: ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲು
ಕೊಲೆ ಮಾಡಿದವರು ಯಾರು ಎಂಬುದರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಸ್ನೇಹಿತರು ಹಾಗೂ ಕುಟುಂಬಸ್ಥರ ವಿಚಾರಣೆ ನಡೆದಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇನ್ಮುಂದೆ ಸರ್ಕಾರಿ ನೌಕರರು ಟಿ-ಶರ್ಟ್ಸ್​, ಜೀನ್ಸ್​ ಪ್ಯಾಂಟ್​ ಧರಿಸುವಂತಿಲ್ಲ: ಕಾರಣ ಹೀಗಿದೆ ನೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 5 =
Remember me
