ಬಾಗಲಕೋಟೆ:ಇತ್ತ ಪ್ರವಾಹ ಭೀತಿಯಲ್ಲಿ ಸಿಲುಕಿ ಜನ ಪರದಾಡುತ್ತಿದ್ದರೆ, ಅತ್ತ ಜನಪ್ರತಿನಿಧಿಗಳು ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ. ಜನರ ಸಮಸ್ಯೆ ಆಲಿಸಿ ರಕ್ಷಣೆಗೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕಿದ್ದವರೇ ಹೀಗೆ ಅಸಡ್ಡೆ ತೋರಿದರೆ ಏನು ಹೇಳೋದು? ವರುಣನ ಅಬ್ಬರಕ್ಕೆ ತತ್ತರಿಸಿದ ಜನ ಅಕ್ಷರಶಃ ನಲುಗಿದ್ದಾರೆ. ಬದುಕು ಮೂರಾಬಟ್ಟೆಯಾಗಿದೆ. ಇಂತಹ ಸಂಕಷ್ಟ ಕಾಲದಲ್ಲಿ ಮೋಜು ಮಸ್ತಿ ಬೇಕಿತ್ತಾ? ಎಂದು ಸಾರ್ವಜನಿಕರು ಗರಂ ಆಗಿದ್ದಾರೆ.
ಅಂದಹಾಗೆ ಇದು ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದ ಸದ್ಯದ ಪರಿಸ್ಥಿತಿ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಂತೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದಾಗಿ ಕೃಷ್ಣಾ ನದಿ ಪ್ರವಾಹದ ಭೀತಿ ಜನರಲ್ಲಿ ಆವರಿಸಿದೆ. ಆದರೆ ಕ್ಷೇತ್ರದ ಜನರ ಸಂಕಷ್ಟವನ್ನು ಮರೆತು ಇಲ್ಲಿನ ರಾಜಕಾರಣಿಗಳು ಗೋವಾದಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ.
ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯರೆಲ್ಲರೂ ಗೋವಾಕ್ಕೆ ಹೋಗಿದ್ದಾರೆ. ಅಲ್ಲಿನ ರೆಸಾರ್ಟ್‌ನಲ್ಲಿ ಬೀಡುಬಿಟ್ಟಿದ್ದಾರೆ. ಅವರಿಗೆ ಬಿಜೆಪಿ ಶಾಸಕ ಸಿದ್ದು ಸವದಿ ಕೂಡ ಸಾಥ್ ನೀಡಿದ್ದಾರೆ. ಇವರೆಲ್ಲರೂ ಗೋವಾ ರೆಸಾರ್ಟ್‌ನ ಸ್ವಿಮಿಂಗ್ ಪೂಲ್‌ನಲ್ಲಿ ಹಾಯಾಗಿ ಈಜಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಈಗ ವೈರಲ್ ಆಗಿವೆ.
ನಡುರಸ್ತೆಯಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಹತ್ಯೆ, ಬೆಚ್ಚಿಬಿದ್ದ ಶಿವಮೊಗ್ಗ ಜನತೆ! ಈತ ಲವ-ಕುಶ ಕೊಲೆಯ ಪ್ರಮುಖ ಆರೋಪಿ

ಮಾಡದ ತಪ್ಪಿಗೆ ಯುವಕ ಬಲಿ, ಪಿಎಸ್​ಐ ಅಮಾನತು: ಮೃತದೇಹದ ಬಳಿ ಸಿಕ್ಕ ಕವರ್​ನಲ್ಲಿದೆ ಮಹತ್ವದ ಸಾಕ್ಷ್ಯ

ಕಿಕ್​ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕ ಸಾವು: ಆಟ ಆಡುತ್ತಿರುವಾಗಲೇ ಜೀವ ಕಸಿದ ದುರ್ವಿಧಿ

Sign in to your account
Please enter an answer in digits:15 − eleven =
Remember me
