– ಎರಡು ಮಹತ್ವದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು
–ಬಾಗಲಕೋಟೆ- ಕುಡಚಿ ರೈಲ್ವೆ ಮಾರ್ಗ 2025ಕ್ಕೆ ಪೂರ್ಣ
ಬೆಂಗಳೂರು:ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲ್ವೆ ಯೋಜನೆಗಳಾದ ಗದಗ- ವಾಡಿ ಹಾಗೂ ಬಾಗಲಕೋಟೆ- ಕುಡಚಿ ರೈಲ್ವೆ ‌ಯೋಜನೆಗಳ‌ ಪ್ರಗತಿ ಪರಿಶೀಲನಾ ಸಭೆಯನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಬುಧವಾರ ಬೆಂಗಳೂರಿನಲ್ಲಿ‌ ನಡೆಸಿದ್ದಾರೆ.
ಉತ್ತರ ಕರ್ನಾಟಕದ ಎರಡು ಮುಖ್ಯ ರೈಲ್ವೆ ಯೋಜನೆಗಳಾದ ಗದಗ-ವಾಡಿ ಮತ್ತು ಬಾಗಲಕೋಟೆ-ಕುಡಚಿ ನಡುವಿನ ಮಾರ್ಗಗಳ ಪ್ರಗತಿ ಪರಿಶೀಲನೆ ಬಗ್ಗೆ ಪ್ರತ್ಯೇಕ ಸಭೆಗಳನ್ನು ನಡೆಸಿದ ಸಂದರ್ಭದಲ್ಲಿ ಮಾತನಾಡಿದ .ಬಿ ಪಾಟೀಲ ಅವರು, ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲ್ವೆ ಯೋಜನೆಗಳಲ್ಲಿ ಒಂದಾದ 257 ಕಿಲೋಮೀಟರ್ ಉದ್ದದ ಗದಗ- ವಾಡಿ ನಡುವಿನ ಮಾರ್ಗವನ್ನು 2026ರ ಮಾರ್ಚ್ ಒಳಗೆ ಮುಗಿಸುವ ಗಡುವು ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಒಟ್ಟು ರೂ. 1,922 ಕೋಟಿ ಅಂದಾಜು ವೆಚ್ಚದ ಈ ಯೋಜನೆಯು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆಗಳ ತಲಾ ಶೇಕಡಾ 50ರಷ್ಟು ವೆಚ್ಚ ಹಂಚಿಕೆಯಲ್ಲಿ ನಡೆಯುತ್ತಿದೆ. ಈ ಕಾಮಗಾರಿಗೆ 4,002 ಎಕರೆ ಭೂಮಿ ಅಗತ್ಯವಿದ್ದು, ಈಗಾಗಲೇ 3,945 ಎಕರೆ ಭೂಮಿಯನ್ನು ಕಾಮಗಾರಿಗಾಗಿ ಬಿಟ್ಟುಕೊಡಲಾಗಿದೆ. ಮಿಕ್ಕ 57 ಎಕರೆ ಭೂಮಿಯನ್ನು ಇನ್ನೊಂದು ತಿಂಗಳೊಳಗೆ ಕೊಡಲಾಗುತ್ತದೆ ಎಂದು ಸಚಿವರು ವಿವರಿಸಿದರು. ಗದಗದಿಂದ ತಳಕಲ್ ವರೆಗೆ ಈಗಾಗಲೇ ರೈಲ್ವೆ ಹಳಿ ಇದೆ. ತಳಕಲ್ ನಿಂದ ಕುಷ್ಟಗಿವರೆಗಿನ 57 ಕಿ.ಮೀ. ಪೈಕಿ ಹನುಮಪುರದವರೆಗೆ ಕೆಲಸ ಮುಗಿದಿದೆ. ಕುಷ್ಟಗಿವರೆಗಿನ ಮಾರ್ಗ ಮಾರ್ಚ್ 24ರೊಳಗೆ ಮುಗಿಯಲಿದೆ.ಅದಾದ ಮೇಲೆ ಇಲ್ಲಿ ಪ್ರಾಯೋಗಿಕ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದರು.

ಗದಗ-ವಾಡಿ ರೈಲು ಮಾರ್ಗ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಒತ್ತು ಕೊಡುವಂತೆ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಸಚಿವರನ್ನು ಕೋರಿದರು. ಆಗ ಸಚಿವ ಪಾಟೀಲರು ಸಭೆಯಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗಮನಹರಿಸಲು ಸೂಚಿಸಿದರು. ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ತಂಡಗಳನ್ನು ಕಳುಹಿಸಿ ಗುಣಮಟ್ಟ ಖಾತ್ರಿ ಗೊಳಿಸಿಕೊಳ್ಳುವಂತೆಯೂ ನಿರ್ದೇಶನ ನೀಡಿದರು.
ಒಟ್ಟಾರೆ, ಈ ರೈಲ್ವೆ ಮಾರ್ಗದ ಕಾಮಗಾರಿ 2026ರ ಮಾರ್ಚ್ ಅವಧಿಯನ್ನು ಮೀರುವಂತಿಲ್ಲ. ಈ ಕಾಲಮಿತಿ ಮೀರಿ ಪುನಃ ಕಾಮಗಾರಿ ವೆಚ್ಚ ಹೆಚ್ಚಳವಾಗದಂತೆ ಗಮನ ವಹಿಸಬೇಕು.  ಬಾಗಲಕೋಟೆ- ಕುಡಚಿ, 142 ಕೋಟಿ ಕಿ.ಮೀ‌. ಉದ್ದದ ರೂ‌ 1,530 ಕೋಟಿ ವೆಚ್ಚದ ಕಾಮಗಾರಿಗೆ ಬೇಕಾಗಿದ್ದ 2,496 ಎಕರೆ ಭೂಮಿಯ ಪೈಕಿ 2,476 ಎಕರೆ ಈಗಾಗಲೇ ಹಸ್ತಾಂತರವಾಗಿದೆ. ಉಳಿದ 20 ಎಕರೆ ಭೂಮಿಯನ್ನು ಸದ್ಯದಲ್ಲೇ ಬಿಟ್ಟುಕೊಡಲಾಗುವುದು. 2025ರ ಡಿಸೆಂಬರ್ ಒಳಗೆ ಈ ಕಾಮಗಾರಿ ಮುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಇದೇ ವೇಳೆ ಸಚಿವರು ಈ ಯೋಜನೆಯನ್ನು ಸಾಧ್ಯವಾದರೆ 2025ರ ಏಪ್ರಿಲ್ ಒಳಗೆ, ಅಂದರೆ ಆರು ತಿಂಗಳು ಮುಂಚಿತವಾಗಿ ಮುಗಿಸ ಬೇಕು. ಬಾಗಲಕೋಟೆ- ಖಚ್ಚಿದೋಣಿ- ಲೋಕಾಪುರದವರೆಗಿನ 60 ಕಿ.ಮೀ. ರೈಲ್ವೆ ಕಾಮಗಾರಿ 2024ರ ಮಾರ್ಚ್ ವೇಳೆಗೆ ಮುಗಿಯಲಿದೆ. ಆನಂತರ, ಈ ಭಾಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಮತ್ತೊಂದು ಕಡೆ ಕುಡಚಿ ಭಾಗದಿಂದ ಕಾಮಗಾರಿ ಆರಂಭಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕೆಲಸಗಳಿಗೆ ಚಾಲನೆ ಕೊಡಬೇಕಿದೆ. ಕುಡಚಿಯಿಂದ ಜಗದಾಳ್ ವರೆಗಿನ ಕೆಲಸ ಶುರುವಾಗಲಿದೆ. ಶಾಸಕ ಬಸವರಾಜ ರಾಯರೆಡ್ಡಿ ಮತ್ತು ಎಂ.ಎಲ್.ಸಿ. ಹಾಗೂ ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಅವರು ನಂತರ ಸಚಿವ ಎಂ ಬಿ ಪಾಟೀಲ ಅವರು ಯೋಜನೆಗಳ ಕಾಮಗಾರಿಗಳ ಬಗ್ಗೆ ಮುತುವರ್ಜಿ ವಹಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ರಾಯರೆಡ್ಡಿ, ಪ್ರಕಾಶ ಹುಕ್ಕೇರಿ, ಮಾನಪ್ಪ‌ ವಜ್ಜಲ್ ಸೇರಿದಂತೆ ರೈಲ್ವೆಯ‌ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಗದಗ- ವಾಡಿ‌ ಯೋಜನೆಯನ್ನು 2026ರ ಮಾರ್ಚ್ ಹಾಗೂ ಬಾಗಲಕೋಟೆ- ಕುಡಚಿ‌ ಯೋಜನೆಯನ್ನು 2025ರ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಯಿತು. ರೈಲ್ವೆ ಅಧಿಕಾರಿಗಳು ಕೂಡ ಈ ಗಡುವಿನೊಳಗೆ ಮುಗಿಸುವ ಭರವಸೆ ನೀಡಿದರು.
VIDEO | ಮೇಕೆಗಾಗಿ ರೈಲು ಟಿಕೆಟ್ ಖರೀದಿಸಿದ ಮಹಿಳೆ; ಆಕೆಯ ಪ್ರಾಮಾಣಿಕತೆಗೆ ನೆಟ್ಟಿಗರಿಂದ ಮೆಚ್ಚುಗೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eighteen =
Remember me
