ಬೆಂಗಳೂರು: ಬಗರ್ ಹುಕುಂ ಸಾಗುವಳಿದಾರರ ದೀರ್ಘಾವಧಿ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿ ನೆರವಿನ ಹಸ್ತಚಾಚಿದ್ದು, ಬಗರ್ ಹುಕುಂನಲ್ಲಿ ತಿರಸ್ಕೃತಗೊಂಡ ಅರ್ಜಿದಾರರಿಗೆ ಮತ್ತೊಂದು ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗಾರರಿಗೆ ಮಂಗಳವಾರ ತಿಳಿಸಿದರು.
ಭೂ ಸುಧಾರಣಾ ಕಾಯ್ದೆ ಅಡಿ ಅಕ್ರಮ ಭೂಮಿಯನ್ನು ಸಕ್ರಮಗೊಳಿಸಿಕೊಳ್ಳಲು ಈ ಹಿಂದೆ ರೈತರು ಹಾಕಿದ್ದ ಅರ್ಜಿಗಳು ತಿರಸ್ಕೃತಗೊಂಡಿದ್ದವು. ಇದೀಗ ಅಂತಹ ರೈತರಿಗೆ ಮತ್ತೊಂದು ಅವಕಾಶ ನೀಡಲಿದ್ದು, ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದರು. ಫಾರಂ 50, 53 ರದ್ದಾಗಿದ್ದು, ಬಗರ್ ಹುಕುಂ ಸಾಗುವಳಿ ಮಾಡುತ್ತಿರುವವರಿಗೆ ಈಗ ಭೂಮಿ ನೀಡಲಾಗುವುದಿಲ್ಲ. ಆದರೆ, ಅವಧಿ ವಿಸ್ತರಣೆಗೆ ಸಲ್ಲಿಸಿದ ಮನವಿಗಳ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದನ್ನೂ ಓದಿ:ಆನ್‌ಲೈನ್‌ನಲ್ಲಿ ವಿಕೃತ ಪೋಲಿ ಚಾಟಿಂಗ್: ಬಾಲಕನೊಬ್ಬನನ್ನು ಬಂಧಿಸಿದ ಪೊಲೀಸರು
ಕಟ್ಟಡ ಕಾಮಗಾರಿಗಳಿಗೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ. ಬಿಹಾರ ಕಾರ್ವಿುಕರು ತಮ್ಮ ಪ್ರದೇಶಗಳಿಂದ ಬೆಂಗಳೂರಿಗೆ ವಾಪಸ್ ಬರಲು ಒಪ್ಪಿದ್ದಾರೆ. ತಮ್ಮ ರಾಜ್ಯಗಳಿಗೆ ಹೋಗುವುದು ಬೇಡ ಇಲ್ಲಿಯೇ ಕೆಲಸ ಸಿಗಲಿದೆ ಎಂಬ ಭರವಸೆ ನೀಡಿದ್ದೇವೆ. ಬೆಂಗಳೂರು ವ್ಯಾಪ್ತಿಯಲ್ಲಿ ಎಲ್ಲ ಕಾಮಗಾರಿಗಳ ಆರಂಭಕ್ಕೆ ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದರು
10 ಕೋಟಿ ರೂ. ಆದಾಯ ಸಂಗ್ರಹ:ಆಸ್ತಿಗಳ ನೋಂದಣಿ ಮತ್ತು ಮುಂದ್ರಾಂಕ ಶುಲ್ಕ ರೂಪದಲ್ಲಿ ರಾಜ್ಯದ ಬೊಕ್ಕಸಕ್ಕೆ ಸೋಮವಾರದವರೆಗೆ 10 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಈ ಇಲಾಖೆ ಕಾರ್ಯಾರಂಭಿಸಿದ ಮೊದಲ ದಿನ 6 ಲಕ್ಷ ರೂ. ಆದಾಯ ಬಂದಿತ್ತು ಎಂದು ಕಂದಾಯ ಮಂತ್ರಿ ತಿಳಿಸಿದರು.
500 ರೂಪಾಯಿಗೋಸ್ಕರ 30 ಕಿ.ಮೀ. ನಡೆದ ಮಹಿಳೆಗೆ ಸಮಾಜ ನೀಡಿತು ಭರಪೂರ ನೆರವು..

ಪೆಟ್ರೋಲ್​, ಡೀಸೆಲ್​ಗಳನ್ನೂ ಜಿಎಸ್​ಟಿ ವ್ಯಾಪ್ತಿಗೆ ತನ್ನಿ: ಅಸೋಚಾಮ್ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
