ಬೆಂಗಳೂರು:ಗ್ರಾಮ ಪಂಚಾಯಿತಿಗಳಿಗೆ ಜವಾಬ್ದಾರಿ ನಕ್ಷೆ ರಚಿಸುವುದು ಸೇರಿದಂತೆ 10 ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸ್ವಾಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಫೆ.8 ರಂದು ಬೆಂಗಳೂರು ಚಲೋ ನಡೆಯಲಿದೆ.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ನೇತೃತ್ವದಲ್ಲಿ ಈ ಚಲೋ ಆಯೋಜಿಸಲಾಗಿದೆ. ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಫೆ.8 ರಂದು 10.30ಕ್ಕೆ ಸಮಾವೇಶ ನಡೆಯಲಿದ್ದು, ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಾಶೆಟ್ಟಿಹಳ್ಳಿ ಸತೀಶ್ ನೇತೃತ್ವ ವಹಿಲಿದ್ದಾರೆ.
ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿದ್ದರೂ ಕೂಡ ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಹಸ್ತಕ್ಷೇಪ ದಿನೇ ದಿನೆ ಹೆಚ್ಚುತ್ತಿರುವುದನ್ನು ಚಲೋ ಮೂಲಕ ಖಂಡಿಸಲಾಗುತ್ತಿದೆ.
ಗ್ರಾ.ಪಂ.ಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಬೇಕಾದ ಜವಾಬ್ದಾರಿ ನಕ್ಷೆ ರಚಿಸಬೇಕು, ಪ್ರಜಾಪ್ರಭುತ್ವದ ಮೂಲ ಘಟಕಗಳಾದ ಪ್ರಜೆಗಳಿಗೆ ಅಧಿಕಾರ ನೀಡಲು ಗ್ರಾಮಸಭಾಗಳಿಗೆ ನಿಯಮ ರೂಪಿಸಬೇಕು, ಬಾಪೂಜಿ ಸೇಔಆ ಕೇಂದ್ರಗಳನ್ನು ಬಲವರ್ಧನೆ ಮಾಡಬೇಕು, ಎಲ್ಲ ಇಲಾಖೆಗಳು ಪಂಚಾಯತ್ ರಾಜ್ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುವಂತಾಗಲು ಅಧಿಕಾರ ವಿಕೇಂದ್ರೀಕರಣ ಕಾಯ್ದೆ ರಚಿಸಬೇಕು. ಕಚೇರಿ ನಿರ್ವಹಣಾ ಕೈಪಿಡಿ ರಚಿಸಬೇಕು. ಇ-ಸ್ವತ್ತು ಆಂದೋಲನದ ಮೂಲಕ ಗ್ರಾ.ಪಂ. ತೆರಿಗೆಗೆ ಒಳಪಟ ಟ್ಟಿರುವ ಎಲ್ಲ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ಸೃಜನೆ ಮಾಡಿ ಹಂಚಬೇಕು. ಪಂಚಾಯಿತಿ ಸದಸ್ಯರನ್ನು ರಾಜ್ಯ ಶಿಷ್ಟಾಚಾರಕ್ಕೆ ಒಳಪಡಿಸಬೇಕು. ಕೇರಳ ಮಾದರಿಯ ಗೌರವಧನ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದ ತೊಡಕು ನಿವಾರಿಸಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಈ ಚಲೋ ನಡೆಯಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
