ಬೆಂಗಳೂರು:ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾದ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್​ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್​ ರೇವಣ್ಣಗೆ ನಿರಾಸೆ ಉಂಟಾಗಿದ್ದು, ಪ್ರಜ್ವಲ್​ ಪರ ವಕೀಲರು ಹೈಕೋರ್ಟ್​ ಮೆಟ್ಟಿಲೇರುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ನ್ಯಾಯಾಂಗ ಬಂಧನ ವಿಧಿಸಿದ ಕಾರಣ ಪರಪ್ಪನ ಅಗ್ರಹಾರದಲ್ಲಿದ್ದ ಪ್ರಜ್ವಲ್​ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಮತ್ತೊಮ್ಮೆ ವಶಕ್ಕೆ ಪಡೆದುಕೊಂಡಿದ್ದರು. ಇದಲ್ಲದೆ ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಎಸ್​ಐಟಿ ಅಧಿಕಾರಿಗಳು ಇಂದು (ಜೂನ್ 26) ಸ್ಥಳ ಮಹಜರು ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nine =
Remember me
