ಬೆಂಗಳೂರು:ಐಎಂಎ ಬಹುಕೋಟಿ ವಂಚನೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಹಮ್ಮದ್ ಮನ್ಸೂರ್ ಖಾನ್‌ಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಹಾಗಂತ ಆತನಿಗೆ ಬಿಡುಗಡೆ ಭಾಗ್ಯವೇನೂ ಸಿಕ್ಕಿಲ್ಲ. ಇದೇ ಹಗರಣದಲ್ಲಿ ಸಿಬಿಐ ದಾಖಲಿಸಿರುವ ಪ್ರಕರಣ ಬಾಕಿ ಇದ್ದು, ಅದಕ್ಕೆ ಇನ್ನೂ ಜಾಮೀನು ಸಿಗದ ಕಾರಣ ಮನ್ಸೂರ್​ ಇನ್ನಷ್ಟು ದಿನ ಜೈಲಿನಲ್ಲಿಯೇ ಉಳಿಯಬೇಕಾಗಿದೆ.ಜಾಮೀನು ಕೋರಿ ಮನ್ಸೂರ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ಮಾನ್ಯ ಮಾಡಿರುವ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ, ಅರ್ಜಿದಾರರ ಅನಾರೋಗ್ಯದ ಅಂಶ ಪರಿಗಣಿಸಿ ಷರತ್ತುಬದ್ಧ ಜಾಮೀನು ನೀಡಿದೆ. ಅರ್ಜಿದಾರರು 5 ಲಕ್ಷ ರೂ. ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೆ ಹಾಜರಾಗಬೇಕು. ಸಾಕ್ಷ್ಯಗಳ ನಾಶಮಾಡಬಾರದು. ಸಂಸ್ಥೆಗೆ ಸೇರಿದ ಆಸ್ತಿಗಳನ್ನು ಪರಾಭಾರೆ ಮಾಡಬಾರದು. ಹದಿನೈದು ದಿನಕ್ಕೆ ಒಂದು ಬಾರಿ ಇಡಿ ಕಚೇರಿಗೆ ತೆರಳಿ ಸಹಿ ಹಾಕಬೇಕು. ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ಹೊರಕ್ಕೆ ಹೋಗಬಾರದು ಎಂದು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ
ಅನಾರೋಗ್ಯ ಕಾರಣದಿಂದ ಜಾಮೀನಿಗೆ ಮನವಿ ವಿಚಾರಣೆ ವೇಳೆ ವಾದ ಮಂಡಿಸಿದ್ದ ಮನ್ಸೂರ್ ಖಾನ್ ಪರ ವಕೀಲರು, ಅಜಿದಾರರು ವರ್ಷಗಳಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಗರಣ ಬಯಲಾಗುತ್ತಿದ್ದಂತೆ ವಿದೇಶದಲ್ಲಿದ್ದ ಅವರು ಬಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದು, ತನಿಖೆಗೆ ಸಂಪೂರ್ಣ ಸಹಕರಿಸಿದ್ದಾರೆ. ಈಗಾಗಲೇ ಪಾಸ್‌ಪೋರ್ಟ್ ಅನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಿದ್ದಾರೆ. 2019ರ ಆಗಸ್ಟ್‌ನಿಂದಲೂ ನ್ಯಾಯಾಂಗ ವಶದಲ್ಲಿದ್ದಾರೆ. ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆದ್ದರಿಂದ, ಅನಾರೋಗ್ಯ ಅಂಶ ಪರಿಗಣಿಸಿ ಜಾಮೀನು ನೀಡಿದಲ್ಲಿ ಉತ್ತಮ ಚಿಕಿತ್ಸೆ ಪಡೆದುಕೊಳ್ಳಲು ನೆರವಾಗಲಿದೆ ಎಂದು ನ್ಯಾಯಾಪೀಠಕ್ಕೆ ಮನವಿ ಮಾಡಿದ್ದರು.
ಕೋರ್ಟ್ ಹೇಳಿದ್ದೇನು:ಅರ್ಜಿದಾರರು ಈಗಾಗಲೇ ತಮ್ಮ ಪಾಸ್‌ಪೋರ್ಟ್ ಅನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಿದ್ದು, ಅವರು ವಿದೇಶಕ್ಕೆ ತೆರಳಿ ತನಿಖೆಗೆ ಅಡ್ಡಿಪಡಿಸುತ್ತಾರೆಂಬ ಪ್ರಶ್ನೆ ಮೂಡುವುದಿಲ್ಲ. ಆರೋಗ್ಯದ ಕಾರಣ ನೀಡಿ ಜಾಮೀನಿಗೆ ಮನವಿ ಮಾಡಿದ್ದಾರೆ. ಅಲ್ಲದೆ ಕಾರಾಗೃಹದ ಮುಖ್ಯ ವೈದ್ಯಾಧಿಕಾರಿಗಳು ನೀಡಿರುವ ವರದಿಯಲ್ಲಿ ಅರ್ಜಿದಾರರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಆದ್ದರಿಂದ, ಅರ್ಜಿದಾರರ ಅನಾರೋಗ್ಯದ ವಿಚಾರ ಪರಿಗಣಿಸಿ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಪೀಠ ಹೇಳಿದೆ.
ಮಾರಮ್ಮ ದೇವಿ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಆರೋಗ್ಯಾಧಿಕಾರಿಗಳು ದೌಡು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
