ಬೆಂಗಳೂರು:ಪ್ರಿಯತಮನೊಂದಿಗೆ ಅನೈತಿಕ ಸಂಬಂಧ ಮುಂದುವರಿಸಲು ಅಡಚಣೆಯಾಗಿರುವ ಕಾರಣಕ್ಕೆ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಹಿಳೆಯೊಬ್ಬರಿಗೆ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್​ಪಿಸಿ) 1973ರ ಸೆನ್​ 437(1) ಪರಿಗಣಿಸಿ ಹೈಕೋರ್ಟ್​ ಜಾಮೀನು ನೀಡಿದೆ.
ಗಲ್ಲು, ಜೀವಾವಧಿ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯ ಎಸಗಿದ ಆರೋಪ ಎದುರಿಸುತ್ತಿರುವ ಆರೋಪಿ ಮಹಿಳೆಯಾಗಿದ್ದರೆ, ಆಕೆಯನ್ನು ಜಾಮೀನು ಮೇಲೆ ಬಿಡುಗಡೆ ಮಾಡಲು ಸಿಆರ್​ಪಿಸಿ ಸೆನ್​ 437(1)ನಲ್ಲಿ ಅವಕಾಶವಿದೆ. ಈ ನಿಯಮವನ್ನು ಪರಿಗಣಿಸಿರುವ ಹೈಕೋರ್ಟ್​, ಪತಿಯ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಕುಣಿಗಲ್​ ನಿವಾಸಿ ಹರ್ಷಿತಾಗೆ ಜಾಮೀನು ನೀಡಿ ಹೈಕೋರ್ಟ್​ ಆದೇಶಿಸಿದೆ. ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಹರ್ಷಿತಾ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್​ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಸ್​.ವಿಶ್ವಜಿತ್​ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ.ಅರ್ಜಿದಾರೆ ಒಂದು ಲಕ್ಷ ರು. ಮೊತ್ತದ ವೈಯಕ್ತಿಕ ಬಾಂಡ್​, ಅಷ್ಟೆ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ನಿಯಮಿತವಾಗಿ ಹಾಜರಾಗಬೇಕು. ಪ್ರಕರಣದ ಸಾಗಳಿಗೆ ಬೆದರಿಕೆ ಹಾಕಬಾರದು. ಸ್ಯಾಧಾರ ತಿರುಚಲು ಯತ್ನಿಸಬಾರದು. ಇದೇ ಮಾದರಿಯ ಅಪರಾಧಗಳಲ್ಲಿ ಭಾಗಿಯಾಗಬಾರದು ಎಂದು ನ್ಯಾಯಪೀಠ ಜಾಮೀನು ಮಂಜೂರಾತಿಗೆ ಅರ್ಜಿದಾರೆಗೆ ಷರತ್ತು ವಿಧಿಸಿದೆ.
ಇರಾಕ್​ ಪ್ರಜೆಯ ಮನವಿ ತಿರಸ್ಕರಿಸಿದ ಹೈಕೋರ್ಟ್​
ಪ್ರಕರಣವೇನು?ಅರ್ಜಿದಾರೆ ಮಂಜುನಾಥ್​ ಎಂಬಾತನನ್ನು ಮದುವೆಯಾಗಿದ್ದರು. ಅರ್ಜಿದಾರೆ ಮದುವೆ ಮುನ್ನವೇ ಮತ್ತೋರ್ವನೊಂದಿಗೆ (ಪ್ರಕರಣದ ಮೊದಲನೆ ಆರೋಪಿ) ಸಂಬಂಧ ಹೊಂದಿದ್ದು, ಅದು ಮುದುವೆ ನಂತರವೂ ಮುಂದುವರೆದಿತ್ತು. ಆದರೆ, ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿರುವ ಕಾರಣಕ್ಕೆ ಪತಿ ಮಂಜುನಾಥ್​ ಕೊಲೆಗೆ ಪ್ರಿಯತಮನಾದ ಮೊದಲನೆ ಆರೋಪಿಯೊಂದಿಗೆ ಅರ್ಜಿದಾರೆ ಪಿತೂರಿ ಹೂಡಿದ್ದರು. ಅದರಂತೆ, ಮೊದಲನೆ ಆರೋಪಿ ಮಂಜುನಾಥ್​ ಕೊಲೆಗೆ ಇತರೆ ಐವರು ಆರೋಪಿಗೆ ಸುಪಾರಿ ನೀಡಿ, 50 ಸಾವಿರ ಪಾವತಿಸಿದ್ದರು. 2023ರ ಫೆ.3ರಂದು ಐವರು ಆರೋಪಿಗಳು ಅರ್ಜಿದಾರೆ ಮನೆಗೆ ಬಂದಿದ್ದರು. ಆಕೆಯ ಬಾಗಿಲು ತೆರೆದು, ಪತಿ ಮಲಗಿರುವ ಕೊಣೆ ತೋರಿಸಿದ್ದರು. ಐವರು ಆರೋಪಿಗಳು ರಾಡ್​ನಿಂದ ಹೊಡೆದು ಮಂಜುನಾಥ್​ ತಲೆ ಹೊಡೆದು ಸಾಯಿಸಿದ್ದರು. ನಂತರ ಮೃತದೇಹವನ್ನು ಸಾಗಿಸಿ ಕೆರೆಯ ಪಕ್ಕದಲ್ಲಿ ಬಿಸಾಡಿದ್ದರು ಎಂಬ ಆರೋಪವಿತ್ತು. ಈ ಕುರಿತು ಎಫ್​ಐಆರ್​ ದಾಖಲಿಸಿ ತನಿಖೆ ನಡೆಸಿದ್ದ ಕುಣಿಗಲ್​ ಠಾಣಾ ಪೊಲೀಸರು ಅರ್ಜಿದಾರೆ, ಆತನ ಪ್ರಿಯತಮ ಮತ್ತು ಇತರೆ ಐವರು ಆರೋಪಿಗಳನ್ನು ಬಂಧಿಸಿದ್ದರು. ಅಧೀನ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರಿಂದ ಅರ್ಜಿದಾರೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 16 =
Remember me
