ಬೆಂಗಳೂರು:ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿ ಎಡಿಜಿಪಿ ಆಗಿದ್ದ ಅಮೃತ್ ಪೌಲ್‌ಗೆ ಜಾಮೀನು ನೀಡಲು ನಗರದ 24ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಕೆ.ಲಕ್ಷ್ಮೀನಾರಾಯಣ ಭಟ್ ಅವರಿದ್ದ ಪೀಠ ಬುಧವಾರ ಆದೇಶಿಸಿದೆ.
ವಿಚಾರಣೆ ವೇಳೆ ಸಿಐಡಿ ಪೊಲೀಸರ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನಕುಮಾರ್ ವಾದಿಸಿ, ಅಮೃತ್ ಪಾಲ್ ಪಿಎಸ್‌ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದರು. ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಇರಿಸಲಾಗಿದ್ದ ಸೇಫ್ ಲಾಕರ್ ಕೀ ಅವರ ಬಳಿ ಇತ್ತು. ಅವುಗಳನ್ನು ತಮ್ಮ ಕಿರಿಯ ಅಧಿಕಾರಿಗಳಿಗೆ ಕೊಟ್ಟು ದುರುಪಯೋಗ ಮಾಡಿದ್ದಾರೆ. ಮುಖ್ಯವಾಗಿ ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲದ ಕಾರಣ ಜಾಮೀನು ನೀಡಬಾರದು ಎಂದು ಕೋರಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಅಮೃತ್ ಪಾಲ್ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು. ಪರೀಕ್ಷಾ ಉತ್ತರ ಪತ್ರಿಕೆಗಳನ್ನು ಇರಿಸಲಾಗಿದ್ದ ಸೇಫ್​ ಲಾಕರ್‌ನ ಕೀ, ನೇಮಕಾತಿ ಉಸ್ತುವಾರಿಯಾಗಿದ್ದ ಅಮೃತ್ ಪಾಲ್ ಬಳಿ ಇದ್ದವು. ಆದರೆ, ಅವು ತಮ್ಮ ಅಧೀನ ಅಧಿಕಾರಿಗಳ ಬಳಿಗೆ ಹೋದ ಬಗ್ಗೆ ಅಮೃತ್ ಪಾಲ್ ಸೂಕ್ತ ವಿವರಣೆ ನೀಡಿಲ್ಲ. ಅರ್ಜಿದಾರರು ಎಸಗಿರುವ ಅಪರಾಧ ಕೃತ್ಯವು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೆ, ಪ್ರಕರಣದ ಅಕ್ರಮಗಳ ಕುರಿತು ಸಾಕ್ಷಿಗಳು ನೀಡಿರುವ ಹೇಳಿಕೆಯನ್ನು ಮುಖ್ಯ ವಿಚಾರಣೆಯಲ್ಲಿ ಪರೀಕ್ಷಿಸಬೇಕಿದೆ. ಅಮೃತ್ ಪಾಲ್ ಅವರು ರಾಜ್ಯದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು, ಜಾಮೀನು ಮೇಲೆ ಬಿಡುಗಡೆಯಾದರೆ ಪ್ರಾಸಿಕ್ಯೂಷನ್ ದಾಖಲೆಗಳು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ ಸಾಧ್ಯತೆ ಇದೆ. ಆದ್ದರಿಂದ ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಗಂಡನ ಕಿರುಕುಳ: ದೇಶದಲ್ಲಿ ಕರ್ನಾಟಕವೇ ಪ್ರಥಮ; ಮದ್ಯವ್ಯಸನಿಗಳಿಂದಲೇ ಜಾಸ್ತಿ ಉಪಟಳ..

ಗೃಹಪ್ರವೇಶದ ಮರುದಿನವೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ; ಮಗಳಿಂದಲೇ ಅಂತಿಮಸಂಸ್ಕಾರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + seven =
Remember me
