ಶಿವಮೊಗ್ಗ:ಬಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಹತ್ಯೆಗೈಯಲಾಗಿದ್ದು, ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಇಂದು ರಾತ್ರಿ ಈ ಕೊಲೆ ನಡೆದಿದೆ. ಬಜರಂಗದಳದ ಕಾರ್ಯಕರ್ತ ಹರ್ಷ (24) ಎಂಬಾತನನ್ನು ಭಾರತಿ ಕಾಲನಿಯಲ್ಲಿ ಅಟ್ಟಾಡಿಸಿಕೊಂಡು ಹೋದ ದುಷ್ಕರ್ಮಿಗಳು ಭರ್ಜಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡ ಹರ್ಷನನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ಆಸ್ಪತ್ರೆ ಬಳಿ ಅಪಾರ ಸಂಖ್ಯೆಯಲ್ಲಿ ಹಿಂದೂಪರ ಕಾರ್ಯಕರ್ತರು ಜಮಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಗಿದೆ.
ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲೂ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.
ಕೊಲೆ ಬಳಿಕ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದ್ದು, ನಗರಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ನಾಳೆ ರಜೆ ಎಂದು ಘೋಷಿಸಲಾಗಿದೆ. ಇನ್ನೊಂದೆಡೆ ಕೆಲವು ಕಡೆ ಕಲ್ಲು ತೂರಾಟ ಕೂಡ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + two =
Remember me
