ಚಿಕ್ಕಬಳ್ಳಾಪುರ:ರಾಜ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಂಘದ ನಿಷೇಧದ ಘೋಷಣೆ ಹಿನ್ನೆಲೆ ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳು ಚಿಕ್ಕಬಳ್ಳಾಪುರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕುತ್ತಿವೆ.
ಚಿಕ್ಕಬಳ್ಳಾಪುರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿರುವುದಕ್ಕೆ ಪ್ರತಿಭಟನೆಗೆ ಸಾಥ್ ನೀಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಕಾಂಗ್ರೆಸ್ ಧೋರಣೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ಬಿಟ್ಟ ಬೆನ್ನಲ್ಲೇ ಮತ್ತೊಂದು ದೃಢ ನಿರ್ಧಾರ ತೆಗೆದುಕೊಂಡ ಮಾಜಿ ಸಿಎಂ ಜಗದೀಶ್​ ಶೆಟ್ಟರ್​!
ಪ್ರತಿಭಟನೆಯಲ್ಲಿ ಸಚಿವ ಡಾ ಕೆ.ಸುಧಾಕರ್ ಮಾತನಾಡಿ, ಉಗ್ರಗಾಮಿ ಸಂಘಟನೆಗಳಿಗೂ ದೇಶಭಕ್ತಿಯ ರಾಷ್ಟ್ರೀಯವಾಗಿ ಸಂಘಟನೆಗಳಿಗೂ ಹೋಲಿಕೆ ಸಲ್ಲದು. ನ್ಯಾಯಾಲಯವೇ ಉಗ್ರ ಚಟುವಟಿಕೆಗೆ ಉತ್ತೇಜನ ನೀಡುವ ಸಂಘ ಸಂಸ್ಥೆಗಳಿಗೆ ಛೀಮಾರಿ ಹಾಕಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಕಾಂಗ್ರೆಸ್‌‌ಗೆ ತನ್ನದೇ ಆದ ವೋಟ್ ಬ್ಯಾಂಕ್ ಇದೆ: ಅಶೋಕ್ ಚವ್ಹಾಣ್
ಸಾಕ್ಷ್ಯಾಧಾರಗಳನ್ನಾಧಾರಿಸಿ ಕೆಲ ಸಂಘಟನೆಗಳನ್ನು ಬ್ಯಾನ್ ಸಹ ಮಾಡಿದೆ. ಹೀಗಿರುವಾಗ ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ಗೊಂದಲ‌ ಸೃಷ್ಟಿಸುತ್ತಿದೆ. ಕಾಂಗ್ರೆಸ್ ವಿಕಾಸದ ಬದಲಿಗೆ ವಿನಾಶಕಾರಿ ಪರವಾಗಿ ಇದೆ. ಉಗ್ರ ಸಂಘಟನೆಗಳೊಂದಿಗೆ ದೇಶಭಕ್ತಿಯ ಸಂಘಟನೆಗಳನ್ನು‌ ಒಂದೇ ದೃಷ್ಟಿಯಲ್ಲಿ ನೋಡುತ್ತಿದೆ. ಇಂತಹ ಧೋರಣೆಗಳಿಂದಲೇ ಈಗಾಗಲೇ ದೇಶದ ವಿವಿಧೆಡೆ ಕಾಂಗ್ರೆಸ್ ಕಚೇರಿಗಳು ಮುಚ್ಚಿ ಹೋಗಿವೆ ಎಂದು ಕಾಂಗ್ರೆಸ್​​ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಕರ್ನಾಟಕದಲ್ಲೂ ಇಂತಹ ಪರಿಸ್ಥಿತಿಯೇ ಕಾಂಗ್ರೆಸ್​ಗೆ ಬರಲಿದೆ. ಒಂದು‌ ಸಮುದಾಯದ ಮನವೊಲಿಕೆಯ ಪ್ರಯತ್ನದಲ್ಲಿ ವಿವಾದ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 17 =
Remember me
