ವಿಜಯಪುರ:ಹಣಕ್ಕಾಗಿ ಬೇಕರಿ ಮಾಲೀಕನನ್ನು ಅಪಹರಣ ಮಾಡಿದ, ಕೈ ಹಾಗೂ ಕಾಲಿಗೆ ಚಾಕು ಚುಚ್ಚಿ ಹಲ್ಲೆಯನ್ನೂ ಮಾಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಕೊನೆಗೂ ಆರೋಪಿಗಳು ಸಿಕ್ಕಿಬಿದ್ದಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಇಂಡಿ ಪಟ್ಟಣದಲ್ಲಿ ಬೇಕರಿ ಮಾಲೀಕ ರಾಜಸ್ಥಾನ ಮೂಲದ ಮಾನಸಿಂಗ್‌ ಎಂಬಾತನನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದರು. ಈ ಘಟನೆಯಿಂದ ಪಟ್ಟಣದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಕಾರ್ ಹಿಡಿಯಲು ಪೊಲೀಸ್ ಮತ್ತು ಸಾರ್ವಜನಿಕರು ತೀವ್ರ ಕಸರತ್ತು ನಡೆಸಿದ್ದರು. ಕೊನೆಗೂ ಝಳಕಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ:ನಾಲಿಗೆ ಚಪಲದಿಂದಾಗಿ ಜೈಲು ಸೇರಿದ ಭೂಪರು; ಬಂಧಿತರಿಂದ ಬಂದೂಕು-ಬೈಕ್ ವಶ
ರಾಜಸ್ಥಾನ ಮೂಲದ ಮಾನಸಿಂಗ್ ಕಳೆದ ಕೆಲವು ವರ್ಷಗಳಿಂದ ಇಂಡಿಯಲ್ಲಿ ಬೇಕರಿ ನಡೆಸುತ್ತಿದ್ದ. 50 ಲಕ್ಷ ರೂ.ಗಳಿಗಾಗಿ ಈತನ ಮುಂದೆ ಬೇಡಿಕೆ ಇರಿಸಲಾಗಿತ್ತು. ಬಳಿಕ 20 ಲಕ್ಷ ರೂ.ಗಳಿಗೆ ವ್ಯವಹಾರ ಕುದುರಿತ್ತು. ಆದರೆ ಹಣ ಕೊಡದ ಕಾರಣಕ್ಕೆ ಅಪಹರಿಸಿ ಹಲ್ಲೆ ನಡೆಸಲಾಗಿದೆ. ಕೈ ಹಾಗೂ ಕಾಲಿಗೆ ಚಾಕು ಚುಚ್ಚಿ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ, ಶಾಲಾ-ಕಾಲೇಜು ರಜೆ ಮುಂದುವರಿಕೆ..
ಇಂಡಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಬೇಕರಿ ಮಾಲೀಕ ಮಾನಸಿಂಗ್ ಇದ್ದ ಕಾರನ್ನು ಝಳಕಿ ಕ್ರಾಸ್‌ನಿಂದ ಇದ್ದಕ್ಕಿದ್ದಂತೆ ಲೋಣಿ ಗ್ರಾಮದ ಕಡೆಗೆ ಅಪಹರಣಕಾರರು ತಿರುಗಿಸುತ್ತಿದ್ದಂತೆ ಬೆನ್ನಟ್ಟಿದ್ದ ಪೊಲೀಸರು ಸೆರೆ ಹಿಡಿದಿದ್ದಾರೆ.‌
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
