ಬೆಂಗಳೂರು:ಪಾಲಿಕೆ ವ್ಯಾಪ್ತಿಯಲ್ಲಿ ಬಕ್ರೀದ್, ಜಾತ್ರೆ, ಹಬ್ಬದ ದಿನಗಳು ಹಾಗೂ ಧಾರ್ಮಿಕ ಚಟುವಟಿಕೆ ವೇಳೆ ನಡೆಯುವ ಪ್ರಾಣಿವಧೆ ಮತ್ತು ಬಲಿ ಪ್ರಕ್ರಿಯೆ ಸಂಬಂಧಪಟ್ಟಂತೆ ಬಿಬಿಎಂಪಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ರಸ್ತೆ, ಪಾದಚಾರಿ ಮಾರ್ಗ, ಆಸ್ಪತ್ರೆ ಆವರಣ, ನರ್ಸಿಂಗ್ ಹೋಂ ಹಾಗೂ ಶಾಲೆ ಕಾಲೇಜಿನ ಒಳ ಮತ್ತು ಹೊರಾಂಗಣ,ಆಟದ ಮೈದಾನ, ಉದ್ಯಾನ, ದೇವಸ್ಥಾನ, ಮಸೀದಿ, ಇತರೆ ಧಾರ್ಮಿಕ ಸ್ಥಳಗಳ ಆವರಣ,ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ:ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು, ಸಿ.ಟಿ ರವಿ, ಈಶ್ವರಪ್ಪ ಕುರಿ ಮೇಯಿಸಿಕೊಂಡು ಇರಬೇಕಿತ್ತು: ಸಿದ್ದರಾಮಯ್ಯ
2020ರ ಅಧಿನಿಯಮ ಪ್ರಕಾರ, ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು.ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ. 6 ತಿಂಗಳ ಸಜೆ ಮತ್ತು ದಂಡ ವಿಧಿಸಲಾಗುವುದು. ಪ್ರಾಣಿವಧೆ ಕಾಯ್ದೆ ಪ್ರಕಾರ, ಸಾರ್ವಜನಿಕರು ವಧೆಗೆ ಅರ್ಹ ಮತ್ತು ಆಹಾರಕ್ಕೆ ಯೋಗ್ಯ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಬೇಕು. ಭಾರತೀಯ ದಂಡ ಸಂಹಿತೆ ಸೆಕ್ಷನ್ 429ರ ಪ್ರಕಾರ ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ 5 ವರ್ಷ ಜೈಲು ಶಿಕ್ಷೆ ಇರಲಿದೆ ಎಂದು ಪ್ರಕಟಣೆಯಲ್ಲಿ ಪಾಲಿಕೆ ಎಚ್ಚರಿಕೆ ಕೊಟ್ಟಿದೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳನ್ನು ಬಲಿ, ಕುರ್ಬಾನಿ ಮತ್ತು ವಧೆ ಕೊಡುವುದನ್ನು ನಿಷೇಧಿಸಲಾಗಿದೆ. ಬಲಿ, ಕುರ್ಬಾನಿ, ವಧೆಗಾಗಿ ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳ ಸಾಗಾಟವೂ ಅಪರಾಧವಾಗಿದೆ. ಸಾರ್ವಜನಿಕರು ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಸಂಖ್ಯೆ 82771 00200ಕ್ಕೆ ಕರೆ ಮಾಡಿ ದೂರು ಅಥವಾ ಮಾಹಿತಿ ನೀಡಬಹುದು ಎಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ.ಕೆ.ಪಿ.ರವಿಕುಮಾರ್ ಹೇಳಿದ್ದಾರೆ.
ಅದೊಂದು ಕಾರಣಕ್ಕೆ ಸಿಎಂ ಮೊಬೈಲ್ ಬಳಸುತ್ತಿಲ್ಲ! ಫೋನ್ ಬಳಸದಿರಲು ಸಿದ್ದರಾಮಯ್ಯ ಬಿಚ್ಚಿಟ್ಟ ಕಾರಣ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
