|ಗಂಗಾಧರ್ ಬೈರಾಪಟ್ಟಣರಾಮನಗರ
ನಾಥ ಪಂಥದ ಪ್ರಮುಖ ಪ್ರಚಾರ ಕೇಂದ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾಗಿದ್ದ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಹುಟ್ಟೂರು ಬಾನಂದೂರು ಅಭಿವೃದ್ಧಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಮುಹೂರ್ತ ಕೂಡಿ ಬಂದಿದೆ.
ಶ್ರೀ ಮಠದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದ ರಾಮನಗರ ತಾಲೂಕಿನ ಬಿಡದಿ ಹೋಬಳಿ ಬಾನಂದೂರನ್ನು ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಮೂಲಕ ಶ್ರೀಗಳ ಚಿಂತನೆಯನ್ನು ಮತ್ತಷ್ಟು ಪಸರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಯೋಜನೆ ಘೋಷಣೆಗೊಂಡ ಸುಮಾರು ಎರಡೂವರೆ ವರ್ಷಗಳ ನಂತರ ಶ್ರೀಗಳ ಹುಟ್ಟೂರಿನ ಅಭಿವೃದ್ಧಿಗೆ ಇಂದು (ಜು.19) ಸರ್ಕಾರ ಅಧಿಕೃತ ಚಾಲನೆ ದೊರೆಯಲಿದೆ.
ಏನೇನು ಇರಲಿದೆ?:ಬಾನಂದೂರನ್ನು ಪಾರಂಪರಿಕ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ವಿವೇಕಾನಂದರು ಪಶ್ಚಿಮ ಬಂಗಾಳದಲ್ಲಿ ಸ್ಥಾಪಿಸಿರುವ ಬೇಲೂರು ಮಠದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ನೀಲಿನಕ್ಷೆ ಸಿದ್ಧಪಡಿಸಲಾಗಿದೆ.
ಇದರಂತೆ ಸ್ವಾಮೀಜಿಗಳು ವಾಸ್ತವ್ಯ ಹೂಡುತ್ತಿದ್ದ ಮನೆಯನ್ನು ಸುಮಾರು 1.25 ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರ ವಿಸ್ತೀರ್ಣ 287.01 ಚ ಮೀ ಇರಲಿದೆ. ಇದರ ಜತೆಗೆ ಬಾನಂದೂರು ಸೇರಿ ಸುತ್ತಮುತ್ತಲ ಗ್ರಾಮದ ಯುವ ಸಮುದಾಯಕ್ಕೆ ಅನುಕೂಲವಾಗುವಂತೆ ಕೌಶಲ್ಯಾಭಿವೃದ್ಧಿ ಕೇಂದ್ರ, ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಉಡುಪು ತಯಾರಿಕೆ ಕೇಂದ್ರವನ್ನೂ ಸ್ಥಾಪಿಸಲಾಗುತ್ತಿದ್ದು, ಇದಕ್ಕೆ 3.94 ಕೋಟಿ ರೂ. ಮೀಸಲಿಡಲಾಗುತ್ತಿದೆ. ಇನ್ನು ಶ್ರೀಗಳು ಬಳಸುತ್ತಿದ್ದ ವಸ್ತುಗಳ ಸಂಗ್ರಹ ಮತ್ತು ಪ್ರದರ್ಶನಕ್ಕಾಗಿ ವಸ್ತು ಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು 6.87 ಕೋಟಿ ರೂ.ಗಳಲ್ಲಿ 3168 ಚ ಮೀಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸಮುದಾಯ ಭವನ, ಸಾಂಸ್ಕೃತಿಕ ಭವನವನ್ನು 6.20 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಲಾಗುತ್ತಿದೆ. ಇದರ ಜತೆಗೆ, 1.32 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ, ಬಾಹ್ಯ ಸಂಪರ್ಕ ಹಾಗೂ ವಿದ್ಯುತ್ ಸರಬರಾಜು ಸೇರಿ ಇತರ ಕಾಮಗಾರಿಗಳಿಗೆ ಒಟ್ಟು 1.28 ಕೋಟಿ ರೂ. ವರ್ಗೀಕರಿಸಲಾಗಿದೆ.
ಯಾವಾಗ ಘೋಷಣೆ ಆಗಿದ್ದು?:ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ಮಾಗಡಿ ತಾಲೂಕಿನ ವೀರಾಪುರ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಹುಟ್ಟೂರು ಬಿಡದಿಯ ಬಾನಂದೂರನ್ನು ಧಾರ್ವಿುಕ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ತಲಾ 25 ಕೋಟಿ ರೂ. ಬಜೆಟ್​ನಲ್ಲಿ ಮೀಸಲಿಟ್ಟಿದ್ದರು. ಕಳೆದ ಕೆಲವು ತಿಂಗಳ ಹಿಂದೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಮತ್ತು ಅಧಿಕಾರಿಗಳು ಬಾನಂದೂರನ್ನು ಅಭಿವೃದ್ಧಿಪಡಿಸುವ ನೀಲಿನಕ್ಷೆಗೆ ಅಂತಿಮ ರೂಪ ನೀಡಿದ್ದರು.
ಇಂದು ಚಾಲನೆ:ಬಾನಂದೂರು ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಶಾಸಕ ಎ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಪಾಲ್ಗೊಳ್ಳಲಿದ್ದು, ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಖಾಸಗಿಗೆ ಗುತ್ತಿಗೆ:ಬಾನಂದೂರು ಅಭಿವೃದ್ಧಿಗಾಗಿ ಮೆ.ರೈಟ್ಸ್ ಎನ್ನುವ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಅಲ್ಲದೆ, ಮೊದಲ ಕಂತಿನಲ್ಲಿ ಮಾ.31ರೊಳಗೆ ಸುಮಾರು 7.11 ಕೋಟಿ ರೂ. ಬಿಡುಗಡೆಗೊಳಿಸುವಂತೆ ಆದೇಶ ನೀಡಲಾಗಿತ್ತು. ಇದರೊಂದಿಗೆ ಎರಡೂವರೆ ವರ್ಷದಿಂದ ವಿಳಂಬವಾಗಿದ್ದ ಯೋಜನೆಗೆ ಸೋಮವಾರ ಚಾಲನೆ ಸಿಗಲಿದೆ.
ರಾಜ್ಯದಲ್ಲಿ ಇಳಿಕೆಯಾದ ಸೋಂಕು: ಇಂದು 1,708 ಜನರಲ್ಲಿ ಕರೊನಾ ಪತ್ತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
