ವಿದ್ಯಾರ್ಥಿಗಳಿಗೆ ಬಿಸಿಯೂಟದ ಜತೆಗೆ ಹಾಲು ಮಿಶ್ರೀತ ರಾಗಿಶ್ಯೂರ್ ವಿತರಣೆ | ಆರೋಗ್ಯ ರಕ್ಷಣೆಗೆ ಮಕ್ಕಳಿಗೆ ಸಲಹೆ
ಮಕ್ಕಳ ಹಂತದಿಂದಲೇ ಸದೃಢ ದೇಹಾರೋಗ್ಯ ಮತ್ತು ಮಾನಸಿಕ ಆರೋಗ್ಯ ಹೊಂದಲು ಸಮತೋಲನ ಆಹಾರ ಸೇವನೆ ಮುಖ್ಯವಾಗಿದ್ದು, ಅಪೌಷ್ಟಿಕತೆಯನ್ನು ಹೋಗಲಾಡಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಮುನಿರಾಜು ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮುದ್ದೇನಹಳ್ಳಿ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಕೆಎಂಎಫ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ ಯೋಜನೆಯೊಂದಿಗೆ ಹಾಲು ಮಿಶ್ರೀತ ಸಾಯಿಶ್ಯೂರ್ ರಾಗಿಮಿಕ್ಸ್ ವಿತರಣಾ ಆರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ರಾಗಿ ಹೆಲ್ತ್​ಮಿಕ್ಸ್​ನಲ್ಲಿ ಬಹುಪೋಷಕಾಂಶಗಳಿದ್ದು, ಗ್ರಾಮೀಣಭಾಗದ ಮಕ್ಕಳಿಗೆ ಉಪಯುಕ್ತವಾದುದು. ಸರ್ಕಾರವು ಮಕ್ಕಳ ಹಾಜರಾತಿ ಹೆಚ್ಚಳಕ್ಕೆ, ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕ್ಷೀರಭಾಗ್ಯ, ಬಿಸಿಯೂಟದಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅತಿಯಾದ ಮೊಬೈಲ್ ಬಳಕೆಯಂತಹ ಚಟಗಳಿಗೆ ಬಲಿಯಾಗಬಾರದು. ಪುಸ್ತಕಗಳನ್ನು ಓದುವ ಹವ್ಯಾಸ ಹೆಚ್ಚಿಸಿಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಯಮೇಲೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯತೆಯು ಹೆಚ್ಚು ಪ್ರಭಾವ ಬೀರುವುದರಿಂದ, ಆರೋಗ್ಯದ ಕಡೆಗೆ ಹೆಚ್ಚು ಗಮನವಹಿಸಬೇಕು. ಸೂಕ್ಷ್ಮ ಪೋಷಕಾಂಶಗಳೂ ಸೇರಿ ಖನಿಜಾಂಶಗಳು, ಸಮತೋಲನ ಆಹಾರಾಂಶಗಳು ರಾಗಿ ಹೆಲ್ತ್​ಮಿಕ್ಸ್ ಮೂಲಕ ದೊರೆಯಲಿರುವುದರಿಂದ ಮಕ್ಕಳು ಖುಷಿಯಿಂದ ಸೇವಿಸಬೇಕು. ಮಕ್ಕಳ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ಸರ್ಕಾರವು ಒದಗಿಸುವ ಎಲ್ಲ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದರು. ತಾಲೂಕು ಅಕ್ಷರದಾಸೋಹ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ, ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯ ಜತೆಗೆ, ಜಿಲ್ಲೆಯಲ್ಲಿ ಕಳೆದ ಅನೇಕ ವರ್ಷಗಳಿಂದಲೂ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಕಾರದಲ್ಲಿ ಸಾಯಿಶ್ಯೂರ್ ಪೋ›ಟೀನ್​ವಿುಕ್ಸ್​ನ್ನು ಹಾಲಿನೊಂದಿಗೆ ಬೆರೆಸಿ ಕೊಡಲಾಗುತ್ತಿದೆ. ಜತೆಗೆ ಇದೀಗ ರಾಗಿ ಹೆಲ್ತ್​ಮಿಕ್ಸ್ ನೀಡಲಾಗುತ್ತಿದ್ದು, ತಪ್ಪದೇ ಮಕ್ಕಳು ಖುಷಿಯಿಂದ ಕುಡಿಯಬೇಕು. ಬಿಸಿಯೂಟ ತಿನ್ನುವ ವೇಳೆ, ತರಕಾರಿ ಮತ್ತಿತರ ಪೋಷಕಾಂಶವುಳ್ಳ ಪದಾರ್ಥಗಳನ್ನು ತಪ್ಪದೇ ತಿನ್ನಬೇಕು. ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು. ಬಿಸಿಯೂಟ ಅಡುಗೆ ಸಿಬ್ಬಂದಿಗೆ ರಾಗಿ ಹೆಲ್ತ್ ಮಿಕ್ಸ್ ಮಿಶ್ರೀತ ಹಾಲು ತಯಾರಿಸುವ ಬಗ್ಗೆ ವಿವರಿಸಲಾಯಿತು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ, ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಶಿಕ್ಷಣ ಸಂಯೋಜಕ ಇ.ಭಾಸ್ಕರಗೌಡ, ಬಿಆರ್​ಸಿ ಸಮನ್ವಯಾಧಿಕಾರಿ ತ್ಯಾಗರಾಜು, ಬಿಆರ್​ಪಿಗಳಾದ ಕೆ.ಮಂಜುನಾಥ್, ಲಕ್ಷ್ಮಿನಾರಾಯಣ್, ಚಂದ್ರಕಲಾ, ವೇಣುಮಾಧವಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಇಶ್ರತ್, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಖಜಾಂಚಿ ಗೋಪಾಲಕೃಷ್ಣ, ಶಿಕ್ಷಕಿ ಕಮಲಮ್ಮ, ಅನ್ನಪೂರ್ಣ ಹಿರೇಮಠ್, ಶಿಕ್ಷಕ ಸತೀಶ್ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
