ಬೆಂಗಳೂರು: ಪ್ರಸ್ತುತ ಮಳೆಯಿಂದ ಸಾಕಷ್ಟು ಅವಗಡಗಳು ಉಂಟಾಗುತ್ತಿದ್ದು, ಅಭಿವೃದ್ಧಿ ಹೆಸರಿನಲ್ಲಿ ಹೆದ್ದಾರಿಗಳ ನಿರ್ಮಾಣಕ್ಕಾಗಿ ಗುಡ್ಡಗಳನ್ನು ಅವ್ಯಾಹತವಾಗಿ ಕಡಿಯುವುದನ್ನು ನಿಷೇಧಿಸಿ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತಗೊಂಡಿರುವುದು.ಅಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ಹೆದ್ದಾರಿ ನಿರ್ಮಿಸಿರುವುದು ಅನಾಹುತಕ್ಕೆ ಕಾರಣವಾಗಿದೆ. ಅಲ್ಲದೆ, ಇದಕ್ಕೆ ಐಆರ್‌ಬಿ ಗುತ್ತಿಗೆದಾರ ಕಂಪನಿ ನೇರ ಹೊಣೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರ ಕಂಪನಿಯು ದುರ್ಮರಣಕ್ಕೀಡಾದವರ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಉತ್ತರ ಕನ್ನಡ ಜಿಲ್ಲೆಯು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಪರಿಸರ ಸಂವೇದಿ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೊಳ್ಳುವ ಮೊದಲು ಪರಿಸರಕ್ಕೆ ಹಾನಿಯಾಗದಂತೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕು. ಮುಂದಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಗೋವಾ ರಾಜ್ಯದಲ್ಲಿ ಈಗಾಗಲೇ ಗುಡ್ಡ ಕಡಿಯುವುದನ್ನು ನಿರ್ಬಂದಿಸಲಾಗಿದೆ. ಅದೇ ಮಾದಿಯಲ್ಲಿ ನಮ್ಮ ರಾಜ್ಯದಲ್ಲೂ ಗುಡ್ಡ ಕಡಿಯುವುದನ್ನು ನಿರ್ಬಂಧಿಸಬೇಕು. ಬಾಂಬೆ-ಪುಣೆ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.
ಗುಡ್ಡದ ಮಧ್ಯೆ ರಸ್ತೆಗಳನ್ನು ನಿರ್ಮಿಸುವಾಗ ಬ್ರಿಟಿಷರ ಮಾದರಿಯ ತಡೆಗೋಡೆಗಳನ್ನು ಕಟ್ಟಬೇಕು. ದೇಶದಾದ್ಯಂತ ಬೆಟ್ಟಗುಡ್ಡಗಳ ನಡುವೆ ಬ್ರಿಟಿಷರು ನೂರಾರು ರೈಲ್ವೆ ಹಳಿಗಳನ್ನು ನಿರ್ಮಿಸಿದ್ದಾರೆ. ಬೃಹತ್ ಬೆಟ್ಟಗಳನ್ನು ಕೊರೆದಿದ್ದಾರೆ, ಸುರಂಗಗಳನ್ನು ನಿರ್ಮಿಸಿದ್ದಾರೆ. ಆದರೆ ಅವುಗಳಿಂದ ಗುಡ್ಡ ಕುಸಿತದಂತಹ ಅವಘಡಗಳು ಸಂಭವಿಸಿರುವ ಉದಾಹರಣೆಗಳು ಬಹಳ ಕಡಿಮೆ. ಆದರೆ ಈಗೀಗ ನಿರ್ಮಾಣಗೊಳ್ಳುತ್ತಿರುವ ಪ್ರತಿ ಕಾಮಗಾರಿಗಳಲ್ಲೂ ಏನಾದರೊಂದು ಅನಾಹುತಗಳು ಸಂಭವಿಸುತ್ತಿವೆ. ಜನರ ತೆರಿಗೆ ಹಣದಲ್ಲಿ ಕೋಟ್ಯಂತರ ವ್ಯಯಿಸಿ ನಿರ್ಮಾಣಗೊಳ್ಳುತ್ತಿರುವ ಇಂತಹ ಯೋಜನೆಗಳು ದುರಂತಗಳಿಗೆ ದಾರಿಯಾಗುತ್ತಿರುವುದು ಬೇಸರದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಗುತ್ತಿಗೆದಾರ ಕಂಪನಿಯಲ್ಲಿ ಕೇಂದ್ರದ ಪ್ರಭಾವಿ ಸಚಿವರೊಬ್ಬರ ಪಾಲುದಾರಿಕೆ ಇದೆ ಎನ್ನಲಾಗುತ್ತಿದೆ.ಈಗಾಗಿ ಸಂಸದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ಮೌನ ಇದನ್ನು ಪುಷ್ಠೀಕರಿಸುತ್ತಿದೆ.ಭ್ರಷ್ಟಾಚಾರ ನಿರ್ಮೂಲನೆಯಾಗದ ಹೊರತು ಸದೃಢ ಕಾಮಗಾರಿ ಅಸಾಧ್ಯ ಎಂದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eight =
Remember me
