ಬೆಂಗಳೂರು:ಗೋಬಿ ಮಂಚೂರಿಯನ್ ಹಾಗೂ ಕಾಟನ್​ ಕ್ಯಾಂಡಿ ಭಾರತದಲ್ಲಿ ಜನಪ್ರಿಯವಾಗಿರುವ ಆಹಾರ ಪದಾರ್ಥಗಳಾಗಿವೆ. ಭಾರತೀಯ ಅಭಿರುಚಿಗೆ ತಕ್ಕಂತೆ ಈ ಎರಡು ಖಾದ್ಯಗಳಿದ್ದು, ಇದು ಸಖತ್​ ಫೆಮಸ್​ ಕೂಡಾ ಆಗಿದೆ. ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್​​ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್​ ​ಅನ್ನು ಈಗ ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ದಟ್ಟವಾಗಿದೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ. ಈ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು. ಇದನ್ನು ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.
ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ‘ರೋಡಮೈನ್‌-ಬಿ’ಹಾಗೂ ಗೋಬಿ ಮಂಚೂರಿಯಲ್ಲಿ‘ಸನ್‌ಸೆಟ್‌ ಯೆಲ್ಲೊ’ಮತ್ತು‘ಟಾಟ್ರ್ರಾಜಿನ್‌’ಎಂಬ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ಪ್ರಸಿದ್ಧ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ವರದಿ ಆಧರಿಸಿ ರಾಜ್ಯ ಸರ್ಕಾರ ಈ ಎರಡು ಖಾದ್ಯಗಳನ್ನು ನಿಷೇಧಿಸಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ:ಯುಪಿ ವಿರುದ್ಧ ಡೆಲ್ಲಿಗೆ ಸೋಲು; WPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ
ತಮಿಳುನಾಡು ಹಾಗೂ ಪಾಂಡಿಚೆರಿಯ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿಬಾಂಬೆ ಮಿಠಾಯಿ (ಕಾಟನ್‌ ಕ್ಯಾಂಡಿ)ಯಲ್ಲಿ ರೋಡಮೈನ್‌-ಬಿ ಅಂಶ ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿನಿಷೇಧ ಮಾಡಲಾಗಿದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್‌ ರೋಗ ಬರುವ ಸಾಧ್ಯತೆ ಇದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ರೋಡಮೈನ್‌-ಬಿ ಅಥವಾ ಆರ್‌ಎಚ್‌ಬಿ ಎಂದು ಕರೆಯುವ ರಾಸಾಯನಿಕವನ್ನು ಜವಳಿ, ಕಾಗದ, ಚರ್ಮ ಮತ್ತು ಬಣ್ಣಗಳ ಉದ್ಯಮದಲ್ಲಿಕೆಂಪು ಮತ್ತು ಗುಲಾಬಿ ಬಣ್ಣಕ್ಕಾಗಿ ಬಳಸಲಾಗುತ್ತದೆ. ಈ ರಾಸಾಯನಿಕವು ಆಹಾರದ ಮೂಲಕ ದೇಹ ಸೇರಿದರೆ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ರೋಡಮೈನ್‌-ಬಿ ನಿಯಮಿತವಾಗಿ ಸೇವಿಸಿದರೆ ಮೆದುಳಿನಲ್ಲಿರುವ ಸೆರೆಬೆಲ್ಲಮ್‌ ಅಂಗಾಂಶಕ್ಕೆ ಮತ್ತು ಮಿದುಳನ್ನು ಬೆನ್ನು ಹುರಿಗೆ ಸಂಪರ್ಕಿಸುವ ಮೆದುಳಿನ ಕಾಂಡಕ್ಕೆ ತೀವ್ರ ಹಾನಿ ಉಂಟುಮಾಡುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
