ಬೆಂಗಳೂರು:ರಾಜ್ಯದ ಜನರ ಬೆವರು ಮತ್ತು ರಕ್ತ ಸುರಿಸಿ ನಿರ್ವಿುಸಲಾಗಿರುವ ಕೃಷ್ಣರಾಜ ಸಾಗರ (ಕೆಆರ್​ಎಸ್) ಅಣೆಕಟ್ಟು ಸುತ್ತ ಗಣಿಗಾರಿಕೆ ನಡೆಸಿದಲ್ಲಿ ಆಗುವ ತೊಂದರೆಗಳ ಅರಿವಿದೆಯೇ? ಏನಾದರೂ ತೊಂದ ರೆಯಾದರೆ ಅಣೆಕಟ್ಟೆಗೆ ಮಾತ್ರವಲ್ಲ, ಇಡೀ ನಾಡಿಗೆ ದುರಂತ ಎದುರಾಗಬಹುದು ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ಕೆಆರ್​ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ನಿರ್ಬಂಧ ವಿಧಿಸಿದೆ.
ಮಂಡ್ಯ ಜಿಲ್ಲೆ ಚಿನಕುರಳಿಯ ಸಿ.ಜಿ. ಕುಮಾರ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಸೋಮವಾರ ಆದೇಶ ನೀಡಿದೆ.
ಜಾರ್ಖಂಡ್​ನ ಧನಾಬಾದ್​ನಲ್ಲಿರುವ ಭಾರತೀಯ ಗಣಿ ಮತ್ತು ಇಂಧನ ಸಂಶೋಧನಾ ಸಂಸ್ಥೆಯಿಂದ ಅಣೆಕಟ್ಟು ಕುರಿತಂತೆ ವೈಜ್ಞಾನಿಕ ಸಮೀಕ್ಷೆ ನಡೆಸಲು ಸೂಚಿಸಿದ್ದು, ವರದಿ ಸಲ್ಲಿಕೆಯಾಗುವ ತನಕ ಅಣೆಕಟ್ಟು ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಯಬಾರದು ಎಂದು ಹೇಳಿದೆ. ಅಣೆಕಟ್ಟು ಪರಿಸರದಲ್ಲಿ ಹಲವು ಬಾರಿ ದೊಡ್ಡ ಶಬ್ದ ಕೇಳಿ ಬಂದಿದ್ದು, ಈಗಾಗಲೇ ಅಪಾಯದಲ್ಲಿ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಎದುರಾಗಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಕಾವೇರಿ ನೀರಿಗಾಗಿ ಮೂರು ರಾಜ್ಯಗಳು ಹೋರಾಡುತ್ತಿವೆ. ಆದರೆ, ಆಣೆಕಟ್ಟು ಸಂರಕ್ಷಣೆಗೆ ಯಾರೂ ಪ್ರಯತ್ನಿಸುತ್ತಿಲ್ಲ. ಇದಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಯಾವುದೇ ಚಟುವಟಿಕೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಪಡಿಸಿದೆ.
ಗಣಿಗಾರಿಕೆ ನಿಷೇಧಿಸಲು ವರದಿ:ಅಣೆಕಟ್ಟೆಯ 25 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಆಣೆಕಟ್ಟು ಸುರಕ್ಷತಾ ಮರುಪರಿಶೀಲನಾ ಸಮಿತಿ 2021ರ ಡಿಸೆಂಬರ್​ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿ ಶಿಫಾರಸು ಮಾಡಿತ್ತು. ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಮತ್ತು ಪುಣೆಯ ಸೆಂಟ್ರಲ್ ವಾಟರ್ ಮತ್ತು ಪವರ್ ರೀಸರ್ಚ್ ಸ್ಟೇಷನ್​ಗಳು ನಿಯಮಾನುಸಾರ ಪರಿಶೀಲನೆ ನಡೆಸಿ ವರದಿ ಕೊಡುವವರೆಗೆ ಎಲ್ಲ ಚಟುವಟಿಕೆ ನಿಷೇಧಿಸುವಂತೆ ತಿಳಿಸಿತ್ತು.
ಜಿಲ್ಲಾಧಿಕಾರಿ ಷರತ್ತು ಪ್ರಶ್ನಿಸಿ ಕೋರ್ಟ್​ಗೆ ಅರ್ಜಿಅರ್ಜಿದಾರರು ತಮ್ಮ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಹಲವು ಷರತ್ತುಗಳೊಂದಿಗೆ ಅನುಮತಿ ನೀಡಿದ್ದರು. ಜತೆಗೆ, ಕಾವೇರಿ ನಿರಾವರಿ ನಿಗಮದ ವತಿಯಿಂದ ನಡೆಸುವ ಪರೀಕ್ಷಾರ್ಥ ಬ್ಲಾಸ್ಟಿಂಗ್ ನಂತರ ಸಲ್ಲಿಸುವ ವರದಿಯನ್ನು ಪರಿಶೀಲಿಸಿ ಸಕ್ಷಮ ಪ್ರಾಧಿಕಾರ ಕೈಗೊಳ್ಳಬಹುದಾದ ನಿರ್ಧಾರಗಳಿಗೆ ಬದ್ಧರಾಗಿರಬೇಕು. ಜತೆಗೆ, ವರದಿ ಬರುವವರೆಗೂ ಪರಿವರ್ತಿತ ಭೂಮಿಯನ್ನು ಉದ್ದೇಶಿತ ಉಪಯೋಗಕ್ಕೆ ಬಳಕೆ ಮಾಡಿಕೊಳ್ಳುವುದಕ್ಕೆ ಯಾವುದೇ ಅವಕಾಶವಿಲ್ಲ ಎಂದು ತಿಳಿಸಲಾಗಿತ್ತು. ಈ ನಿರ್ಬಂಧಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ನಿಷೇಧವಿದ್ದರೂ ನಿಂತಿರಲಿಲ್ಲ!ಪಾಂಡವಪುರ: ವಿಶ್ವವಿಖ್ಯಾತ ಕೆಆರ್​ಎಸ್ ಅಣೆಕಟ್ಟೆ ಸುತ್ತಲಿನ ಅದರಲ್ಲೂ ತಾಲೂಕಿನ ಬೇಬಿ ಬೆಟ್ಟ ಕಾವಲ್, ಚಿನಕುರಳಿ, ಹೊನ್ನಗಾನಹಳ್ಳಿ, ಬನ್ನಂಗಾಡಿ, ಕಟ್ಟೇರಿ ಗ್ರಾಪಂ ವ್ಯಾಪ್ತಿಯಲ್ಲಿ ಎರಡು ದಶಕಗಳಿಂದ ನಿರಂತರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು. ಜಲ್ಲಿಕಲ್ಲಿಗೆ ಬೇಡಿಕೆ ಹೆಚ್ಚಾದಂತೆ ಗಣಿ ಮಾಲೀಕರು ಮೊದಲಿಗಿಂತಲೂ ಹೆಚ್ಚು ಸಾಮರ್ಥ್ಯದ ಕ್ರಷರ್ ಅಳವಡಿಸಿ, ಸ್ಪೋಟಕಗಳನ್ನು ಬಳಸುತ್ತಿದ್ದರಿಂದ ಈ ಪ್ರದೇಶದಲ್ಲಿ ಭಾರಿ ಶಬ್ದದೊಂದಿಗೆ ಭೂಕಂಪನದ ಅನುಭವವಾಗಿತ್ತು. ಇದರಿಂದಾಗಿ ಜಿಲ್ಲಾಡಳಿತ ಗಣಿಗಾರಿಕೆ ನಿಷೇಧಿಸಿತ್ತು. ಹೀಗಿದ್ದರೂ ಗಣಿಗಾರಿಕೆ ಅಕ್ರಮವಾಗಿ ಮುಂದುವರಿದಿತ್ತು. ಇದರ ವಿರುದ್ಧ ರೈತ ಸಂಘ ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಆದರೆ, ಗಣಿಧಣಿಗಳು ಒತ್ತಡ ಹೇರಿ ಟ್ರಯಲ್ ಬ್ಲಾಸ್ಟ್​ಗೆ ತಜ್ಞರ ತಂಡ ಕರೆಸುವಲ್ಲಿ ಯಶಸ್ವಿಯಾಗಿದ್ದರು. ಇದಕ್ಕೂ ವಿರೋಧ ವ್ಯಕ್ತವಾಗಿತ್ತು.
ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಿಂಚಿದ್ದ ಸಿಂಧು ಮೆನನ್​ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
