ಬೆಂಗಳೂರುಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ಇದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದ್ದು, ಹಿಂದಿನ ನಿಯಮಗಳ ಪ್ರಕಾರ ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ಸೂಚನೆ ನೀಡಿದೆ.
ಶಿಕ್ಷಕರ ನೇಮಕಾತಿಯಲ್ಲಿ ಆದಾಯ ಪ್ರಮಾಣ ಪತ್ರದ ವಿಚಾರವಾಗಿ ಮದುವೆಯಾಗಿರುವ ಹುದ್ದೆ ಆಕಾಂಕ್ಷಿಗಳು ತಂದೆ ಅಥವಾ ಪತಿ ಇಬ್ಬರಲ್ಲಿ ಯಾರ ಆದಾಯದ ಪ್ರಮಾಣ ಪತ್ರ ನೀಡಬೇಕೆಂಬ ಗೊಂದಲದ ವಿಚಾರವಾಗಿ ಪ್ರಕರಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸೋಮವಾರ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಹಿಂದಿನ ನಿಯಮಗಳಂತೆ ಪ್ರಕ್ರಿಯೆ ಮುಂದುವರಿಸುವಂತೆ ತಿಳಿಸಿ ವಿಚಾರಣೆಯನ್ನು ಮುಂದೂಡಿದೆ. ಸುಪ್ರೀಂ ತೀರ್ಪಿನಿಂದಾಗಿ ಸಿಂಧುತ್ವ ಪ್ರಮಾಣಪತ್ರ ಸಲ್ಲಿಸದ ಕಾರಣ ಇಲ್ಲಿಯವರೆಗೂ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರು ಆದೇಶ ಪ್ರತಿ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅನುಕೂಲವಾಗಲಿದೆ.
ಪ್ರಕರಣದ ಹಿನ್ನೆಲೆ:
ಶಾಲಾ ಶಿಕ್ಷಣ ಇಲಾಖೆಯು 2023ರ ನವೆಂಬರ್‌ನಿಂದಲೇ ನೇಮಕಾತಿ ಆದೇಶ ಪ್ರತಿಯನ್ನು ಅರ್ಹರಿಗೆ ವಿತರಣೆ ಮಾಡುತ್ತಿದೆ. 15 ಸಾವಿರ ಶಿಕ್ಷಕರಲ್ಲಿ 13,352 ಮಂದಿ ಆಯ್ಕೆಯಾಗಿದ್ದರು.ವಿವಾಹಿತ ಮಹಿಳೆಯರು ತಂದೆಯ ಆದಾಯ ಪ್ರಮಾಣಪತ್ರ ನೀಡಿ ನೇಮಕವಾಗಿರುವುದನ್ನು ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತೀರ್ಪು ಪ್ರಕಟವಾಗುವ ತನಕ ಆದೇಶ ಪ್ರತಿ ನೀಡದಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಡಿಡಿಪಿಐ ಗಳು ಆದೇಶ ಪ್ರತಿ ನೀಡುವುದನ್ನು ಸ್ಥಗಿತಗೊಳಿಸಿದ್ದರು.
ಪ್ರಮಾಣಪತ್ರ ಗೊಂದಲ: ಸುಪ್ರೀಂ ತೀರ್ಪು ಅಂತಿಮ
ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳಿಗೆ ತಂದೆ ಅಥವಾ ಪತಿಯಲ್ಲಿ ಯಾರ ಪ್ರಮಾಣಪತ್ರವನ್ನು ಸ್ವೀಕರಿಸಬೇಕು ಎಂಬ ಗೊಂದಲ ಇನ್ನೂ ಮುಗಿದಿಲ್ಲ. ಇದು ಕೇವಲ ಈ ಪ್ರಕರಣಕ್ಕೆ ಮಾತ್ರ ಸೀಮಿತವಾಗಿಲ್ಲ. ಮುಂದಿನ ದಿನಗಳಲ್ಲಿ ಹುದ್ದೆ ಭರ್ತಿಗಳಿಗೂ ಅನ್ವಯಿಸಲಿದೆ. ಹೀಗಾಗಿ, ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡುವ ತೀರ್ಪು ಅಂತಿಮವಾಗಲಿದೆ. ಅಲ್ಲದೆ, ಮುಂದಿನ ನೇಮಕಾತಿಗಳಿಗೂ ಇದೇ ನಿಯಮ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
