ಬೆಂಗಳೂರು:ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧದ ಕ್ರಮ ಫೆಬ್ರವರಿ 1 ರಿಂದ ಜಾರಿಯಾಗಿದೆ. ಈ ಕ್ರಮಕ್ಕೆ ಬೆಂಬಲ ಸೂಚಿಸಿ ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.
ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಯು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಆದ್ದರಿಂದ ಕೇಂದ್ರ ಸರ್ಕಾರವು ಪ್ಲಾಸ್ಟಿಕ್‌ ವೇಸ್ಟ್‌ (ಮ್ಯಾನೇಜ್‌ಮೆಂಟ್‌ ಮತ್ತು ಹ್ಯಾಡ್ಲಿಂಗ್‌) 2011 ಹಾಗೂ ತಿದ್ದುಪಡಿ ನಿಯಮಗಳು 2016 ರ ಮೂಲಕ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಗೆ ಹೆಚ್ಚು ನಿರ್ಬಂಧಗಳನ್ನು ಹೇರಿದೆ. ಇದನ್ನು ಅನುಸರಿಸಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್‌ ಬ್ಯಾಗ್‌ ಹಾಗೂ ಇತರೆ ಉತ್ಪನ್ನಗಳ ಬಳಕೆ ನಿರ್ಬಂಧಿಸಿ 2016ರ ಮಾರ್ಚ್‌ 11 ರಂದು ಅಧಿಸೂಚನೆ ಹೊರಡಿಸಿದೆ.
ಈ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಿಂದ 2023 ರ ಫೆಬ್ರವರಿ 1 ರಂದು ಸುತ್ತೋಲೆ ಹೊರಡಿಸಲಾಗಿದೆ. ಇದರಲ್ಲಿ ಕೆಲ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್‌ಗಳು, ಎಎಮ್‌ಒಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳನ್ನು ಫೆಬ್ರವರಿ 1 ರಿಂದಲೇ ಏಕ ಬಳಕೆಯ ಪ್ಲಾಸ್ಟಿಕ್‌ ಮುಕ್ತ ಪ್ರದೇಶ ಎಂದು ಘೋಷಿಸಬೇಕು. ಕಚೇರಿಯ ಒಳಗೆ ಹಾಗೂ ಆಸ್ಪತ್ರೆಯ ಒಳಗೆ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತರದಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಕುರಿತು ಆರೋಗ್ಯ ಕೇಂದ್ರಗಳ ಆವರಣದಲ್ಲಿ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಆರೋಗ್ಯ ಸೇವೆಗೆ ಸಂಬಂಧಪಟ್ಟ ವೆಬ್‌ಸೈಟ್‌ಗಳಲ್ಲೂ ಈ ಕುರಿತು ಮಾಹಿತಿ ನೀಡಬೇಕು. ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಾದ ಬಾಟಲ್‌, ಕವರ್‌, ಬ್ಯಾಗ್‌ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಒಳಗೆ ತರುವುದನ್ನು ತಡೆಯುವಂತೆ ಆರೋಗ್ಯ ಕೇಂದ್ರಗಳ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು. ಆರೋಗ್ಯ ಕೇಂದ್ರಗಳ ಕ್ಯಾಂಟೀನ್‌ಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಸದಂತೆ ಹಾಗೂ ಗ್ರಾಹಕರಿಗೆ ಅಂತಹ ಉತ್ಪನ್ನಗಳನ್ನು ನೀಡದಂತೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ಏಕ ಬಳಕೆಯ ಪ್ಲಾಸ್ಟಿಕ್‌ಗೆ ನಿರ್ಬಂಧ ವಿಧಿಸಿದೆ. ಜನರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಇಂತಹ ಪ್ಲಾಸ್ಟಿಕ್‌ ಬಳಸದಂತೆ ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಪರಿಸರ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಏಕ ಬಳಕೆಯ ಪ್ಲಾಸ್ಟಿಕ್‌ ಬಳಸುವುದನ್ನು ನಿಲ್ಲಿಸಬೇಕು. ಹಾಗೆಯೇ ಆರೋಗ್ಯ ಕೇಂದ್ರಗಳಲ್ಲಿನ ಈ ನಿಯಮವನ್ನು ಪಾಲಿಸಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − three =
Remember me
