ಉತ್ತರಕನ್ನಡ:ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ಇಂದು ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಭಟ್ಕಳದ ಕೆಲವು ವರ್ತಕರು ಇವತ್ತು ಸ್ವಯಂಪ್ರೇರಿತರಾಗಿ ಬಂದ್ ನಡೆಸಿದ್ದು, ನಾಳೆಯೂ ಬಂದ್ ಮಾಡುವಂತೆ ಸಂಘಟನೆಯೊಂದು ಕರೆ ನೀಡಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಕೋರಿದ್ದನ್ನು ನಿರಾಕರಿಸಿದ್ದ ಹೈಕೋರ್ಟ್​, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಸರ್ಕಾರ ನೀಡಿದ್ದ ಆದೇಶವನ್ನೇ ಎತ್ತಿಹಿಡಿದು ತೀರ್ಪು ನೀಡಿತ್ತು. ಆದರೆ ಈ ಬಗ್ಗೆ ಭಟ್ಕಳದಲ್ಲಿ ಇಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಬೆನ್ನಿಗೇ ಭಟ್ಕಳದಲ್ಲಿ ಬಂದ್!
ಮಾತ್ರವಲ್ಲ, ಮುಸ್ಲಿಂ ಸಮುದಾಯದ ಕೆಲವು ವರ್ತಕರು ಭಟ್ಕಳದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ತೀರ್ಪು ಕುರಿತಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ತಂಜೀಮ್ ಎಂಬ ಸಂಘಟನೆಯೊಂದರ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರ ಸಭೆ ಕೂಡ ನಡೆದಿತ್ತು.
ಇದನ್ನೂ ಓದಿ:52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ನಾಳೆಯೂ ಭಟ್ಕಳದಲ್ಲಿ ಸ್ವಯಂಪ್ರೇರಿತರಾಗಿ ಬಂದ್ ನಡೆಸಬೇಕು ಎಂದು ತಂಜೀಮ್ ಸಂಘಟನೆ ಮುಸ್ಲಿಂ ಸಮುದಾಯದ ವರ್ತಕರಿಗೆ ಕರೆ ನೀಡಿದೆ. ತಂಜೀಮ್​ ಕಾರ್ಯನಿರ್ವಾಹಕ ಮಂಡಳಿ ಸಭೆ ಬಳಿಕ ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳ ಬಂದ್​ಗೂ ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
