ಬೆಂಗಳೂರು:ವಿಶ್ವಾದ್ಯಂತ ಹರಡುತ್ತ ಭೀತಿ ಸೃಷ್ಟಿಸಿರುವ ಕೊರೊನಾ ವೈರಸ್​ನಿಂದಾಗುವ ಅಪಾಯವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸೋಮವಾರದಿಂದ ಜಾರಿಗೆ ಬರುವಂತೆ ಬೆಂಗಳೂರು ಬೆಂಗಳೂರು ನಗರ ಮತ್ತು ಗ್ರಾಮಾಂತರದ ಎಲ್ಲ ಶಾಲೆಗಳ ನರ್ಸರಿ, ಎಲ್​ಕೆಜಿ ಹಾಗೂ ಯುಕೆಜಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಮುಂದಿನ ಆದೇಶದವರೆಗೆ ನರ್ಸರಿ, ಎಲ್​ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ರಜೆ ಇರಲಿದೆ.
ಚೀನಾದ ವುಹಾನ್​ನಲ್ಲಿ ಸೃಷ್ಟಿಯಾಗಿ ಎಲ್ಲೆಡೆ ಹರಡುತ್ತಿರುವ ಕರೋನಾ ವೈರಸ್ ತುರ್ತು ಆರೋಗ್ಯ ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೊಷಿಸಿದೆ. ಇತ್ತೀಚೆಗೆ ಕೇರಳ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನರ್ಸರಿ, ಎಲ್​ಕೆಜಿ ಹಾಗೂ ಯುಕೆಶಿ ತರಗತಿಗಳಿಗೆ ರಜೆ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಮಾಡಿದ್ದರು. ಮನವಿಯನ್ನು ಪರಿಗಣಿಸಿರುವ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.
ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ LKG, UJG ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ.
— S.Suresh Kumar (@nimmasuresh)March 8, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 13 =
Remember me
