ಬೆಂಗಳೂರು:ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 15ನೇ ಆವೃತ್ತಿಯನ್ನು ೆಬ್ರವರಿ 29 ರಿಂದ ಮಾರ್ಚ್ 7ರ ವರೆಗೆ ನಡೆಯಲಿದೆ.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು.
ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಂಘಟನಾ ಸಮಿತಿ ಸಭೆಯ ಜತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ ಎಂದರು.
ಕೋಮುವಾದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.
ದೇಶ-ವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಖ್ಯಾಂಶಗಳು
*ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆ ಕುರಿತ ಚಿತ್ರಗಳಿಗೆ ಒತ್ತು ನೀಡುವುದು, ಮನುಷ್ಯತ್ವದ ಸಂದೇಶ ನೀಡುವುದು.*ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ರಚನೆ.*ನಟಿ ಲೀಲಾವತಿ, ಭಗವಾನ್ ಮತ್ತು ಸಿ.ವಿ. ಶಿವಶಂಕರ್ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶನ.*ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.*ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.*ಒರಾಯನ್ ಮಾಲ್ ನಲ್ಲಿರುವ ಪಿವಿಆರ್‌ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.*ಫೆಬ್ರವರಿ 29 ರಂದು ಸಂಜೆ ಉದ್ಘಾಟನಾ ಸಮಾರಂಭ, ಮುಖ್ಯಮಂತ್ರಿಗಳಿಂದ ಉದ್ಘಾಟನೆ.*ಮಾರ್ಚ್ 7 ರಂದು ಸಂಜೆ ಸಮಾರೋಪ ಸಮಾರಂಭ, ರಾಜ್ಯಪಾಲರಿಂದ ಪ್ರಶಸ್ತಿ ವಿತರಣೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + nine =
Remember me
