ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವಾರ್ಡ್-134 ಬಾಪೂಜಿನಗರ ಹಾಗೂ ವಾರ್ಡ್-135 ಪಾದರಾಯನಪುರದಲ್ಲಿ ಕಂಪ್ಲೀಟ್ ಸೀಲ್ ಡೌನ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ.
ಈ ಎರಡೂ ವಾರ್ಡ್ ಗಳಲ್ಲಿ 5 ಕ್ಕಿಂತ ಹೆಚ್ಚು ಕರೋನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಇಲ್ಲಿ ಲಾಕ್ ಡೌನ್ ಹೇರಲಾಗಿದ್ದರೂ, ನಿಯಮ ಉಲ್ಲಂಘಿಸಿ ಅನಗತ್ಯ ಸಂಚಾರ ಮಾಡುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕು ಸಮುದಾಯದ ಬೇರೊಬ್ಬರಿಗೆ ಹರಡದಂತೆ ತಡೆಯಲು ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದೆ. ಜತೆಗೆ ಬಿಬಿಎಂಪಿ ಹಲವು ಮಹತ್ವದ ಕ್ರಮಗಳನ್ನ ಕೈಗೊಂಡಿದೆ.
ಸಹಾಯವಾಣಿಯಿಂದ ಅಗತ್ಯ ವಸ್ತುಗಳ ಪೂರೈಕೆ: ಹೆಚ್ಚು ಸೋಂಕಿತರಿರುವ ಸ್ಥಳದಲ್ಲಿ ಮನೆಗಳು ಹತ್ತಿರವಿದ್ದು, ಸೋಂಕು ಹರಡುವ ಪ್ರದೇಶಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವ ಮೇಯರ್ ಮತ್ತು ಅಧಿಕಾರಿಗಳ ಜತೆಯಲ್ಲಿ ಸಭೆ ನಡೆಸಲಾಗಿದೆ. ಈ ಎರಡು ವಾರ್ಡ್ ಗಳಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದು, ಅಗತ್ಯ ವಸ್ತುಗಳು ಬೇಕಾದಲ್ಲಿ 100 ಅಥವಾ 1090 ಸಹಾಯವಾಣಿಗೆ ಕರೆ ಮಾಡುವಂತೆ ಸೂಚಿಸಲಾಗಿದೆ.ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬಾರದಂತೆ ಸ್ಪಷ್ಟಪಡಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮನೆ ಮನೆ ಸಮೀಕ್ಷೆ: ಪಾದರಾಯಣಪುರ ಮತ್ತು ಬಾಪೂಜಿ ನಗರ (ಗೋರಿಪಾಳ್ಯ) ವಾರ್ಡ್ ಗಳಲ್ಲಿ ಈಗಾಗಲೇ ಸೋಂಕಿತರ ಪಕ್ಕದ ಮನೆಗಳು ಸೇರಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಸಮೀಕ್ಷೆ ಮೂಲಕ ತಪಾಸಣೆ ಮಾಡಲಾಗಿದೆ.
ಕರೋನಾ ಪಾಸಿಟೀವ್ ಬಂದವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ.ಅವರ ಅಕ್ಕ ಪಕ್ಕದ ತಲಾ 2 ಮನೆಗಳ ಕುಟುಂಬ ಸದಸ್ಯರಿಗೂ ಹೋಮ್ ಕ್ವಾರಂಟೈನ್ ಮಾಡಿದ್ದೇವೆ ಎಂದು ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಲಾಕ್‌ಡೌನ್‌ ಸಮಾಪ್ತಿಯೋ, ವಿಸ್ತರಣೆಯೊ?: ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶೀಘ್ರ ಭಾಷಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
