ಬೆಂಗಳೂರು:ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ನೋಂದಣಿ ಮಾಡುವಾಗ ನಕಲಿ ಲಿಂಕ್ ಹಾಗೂ ಆ್ಯಪ್‌ಗಳ ಬಗ್ಗೆ ಎಚ್ಚರವಹಿಸಿ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಸ್.ಡಿ ಶರಣಪ್ಪ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಶರಣಪ್ಪ ಸೈಬರ್ ಖದೀಮರು ಹಲವು ನಕಲಿ ಆ್ಯಪ್ ಹಾಗೂ ಲಿಂಕ್‌ಗಳನ್ನು ಹರಿಬಿಟ್ಟಿದ್ದು, ಅವುಗಳ ಮೂಲಕ ಸಾರ್ವಜನಿಕರ ದತ್ತಾಂಶ ಕದಿಯಲು ಮುಂದಾಗಿದ್ದಾರೆ. ಈ ಕುರಿತು ವರದಿಗಳು ಬರುತ್ತಿರುವ ಬೆನ್ನಲ್ಲೇ, ಸಾರ್ವಜನಿಕರು ಎಚ್ಚರದಿಂದಿರಬೇಕು.
ಇದನ್ನು ಓದಿ:PUBGಯಿಂದ ಶುರುವಾದ ಲವ್​ ಸ್ಟೋರಿ; ಪ್ರಿಯಕರನನ್ನು ನೋಡಲು ಪಾಕಿಸ್ತಾನದಿಂದ ಭಾರತಕ್ಕೆ ಬಂದಳು ನಾಲ್ಕು ಮಕ್ಕಳ ತಾಯಿ
‘ಗ್ಯಾರಂಟಿ ಯೋಜನೆಗಳ ನೋಂದಣಿಗೆ ಸರ್ಕಾರ ಯಾವುದೇ ಆ್ಯಪ್​ಅನ್ನು ಪರಿಚಯಿಸಿಲ್ಲ. ಆದರೆ, ಹಲವು ನಕಲಿ ಆ್ಯಪ್‌ಗಳು ಡೌನ್‌ಲೋಡ್ ಮಾಡಿಕೊಳ್ಳಲು ಲಭ್ಯವಿದೆ. ಫಲಾನುಭವಿಗಳು ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆ್ಯಪ್‌ಗಳನ್ನು ರಿಪೋರ್ಟ್ ಮಾಡಬೇಕು. ಈ ಬಗ್ಗೆ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಸ್.ಡಿ ಶರಣಪ್ಪ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − eleven =
Remember me
