ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಇತ್ತ ವಿಚಾರಣೆ ತೀವ್ರಗೊಂಡಂತೆ ಹೊಸ ಹಸೊ ವಿಚಾರ ಹಾಗೂ ಹೆಸರುಗಳು ಕೇಳಿ ಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್​ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿ. ದಯಾನಂದ್, ನಾವು ಸ್ವಲ್ಪ ನಿರ್ಲಕ್ಷಿಸಿದ್ದರೂ ಈ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪ್ರಕರಣ ಗಂಭೀರತೆಯಿಂದ ಕೂಡಿರುವ ಕಾರಣ ತನಿಖೆಯ ಹೊಣೆಯಲ್ಲಿ ಎಸಿಪಿಗೆ ವಹಿಸಲಾಗಿದೆ. ತನಿಖೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವೆಡೆ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಹತ್ಯೆಯಾಗಿ 10 ದಿನಗಳಾದರೂ ಈವರೆಗೆ ಪತ್ತೆಯಾಗಿಲ್ಲ ರೇಣುಕಸ್ವಾಮಿ ಮೊಬೈಲ್​; ಪೊಲೀಸರಿಗೆ ತಲೆನೋವಾದ ಪ್ರಮುಖ ಸಾಕ್ಷಿ
ಇನ್ಸ್ಪೆಕ್ಟರ್​ಗಳು ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಬೇರೆ ಬೇರೆ ಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನ ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರಬಂದಿದೆ.
ವ್ಯಕ್ತಿ ಕೊಲೆ ಮಾಡಿರುವುದು ಹೀನ ಅತ್ಯಂತ ಹೇಯ ಕೃತ್ಯ .  ಮೃತ ರೇಣುಕಾಸ್ವಾಮಿ  ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಆಗಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − five =
Remember me
