ಬೆಂಗಳೂರು: ಲಾಕ್​ಡೌನ್​ ಸಮಯದಲ್ಲಿ ರಾಜಧಾನಿಯಲ್ಲಿ ವಶಪಡಿಸಿಕೊಂಡಿದ್ದ ವಾಹನಗಳನ್ನು ಪೊಲೀಸರು ಶುಕ್ರವಾರದಿಂದ ಮರಳಿಸುವ ಪ್ರಕ್ರಿಯೆ ನಡೆಸಲಿದ್ದಾರೆ.
ಲಾಕ್​ಡೌನ್​ ಘೋಷಣೆ ಮಾಡಿದ ಬಳಿಕ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಅಗತ್ಯ ವಸ್ತುಗಳ ಸೇವೆಯಲ್ಲಿ ತೊಡಗಿರುವವರಿಗೆ ಪಾಸ್​ ನೀಡಿ ಸಂಚರಿಸಲು ಅನುಮತಿ ನೀಡಲಾಗಿತ್ತು. ಆದರೆ, ಪಾಸ್​ ಇಲ್ಲದೇ ಹಾಗೂ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಬೆಂಗಳೂರು ಒಂದರಲ್ಲೇ 50,000ಕ್ಕೂ ಅಧಿಕ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಲಾಕ್​ಡೌನ್​ ಅವಧಿ ಮುಗಿದ ಬಳಿಕ ಈ ವಾಹನಗಳನ್ನು ಮಾಲೀಕರಿಗೆ ಮರಳಿಸುವುದಾಗಿ ತಿಳಿಸಲಾಗಿತ್ತು. ಆದರೆ, ಮೇ 1ರಿಂದಲೇ ವಾಹನಗಳನ್ನು ಮಾಲೀಕರಿಗೆ ಒಪ್ಪಿಸುವ ಪ್ರಕ್ರಿಯೆ ಆರಂಭವಾಗಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ತಿಳಿಸಿದ್ದಾರೆ.
ಮಾಲೀಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ವಾಹನಗಳನ್ನು ಪೊಲೀಸರ ವಶದಿಂದ ಮರಳಿ ಪಡೆಯಬಹುದು. ವಾಹನಗಳನ್ನು ಮರಳಿಸಲು ಸಿಎಂ ಹಾಗೂ ಗೃಹಸಚಿವರು ಅನುಮತಿ ನೀಡಿದ್ದಾರೆ ಎಂದು ರಾವ್​ ಹೇಳಿದ್ದಾರೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಆಯಾ ಪೊಲೀಸ್​ ಆಯುಕ್ತರು ಹಾಗೂ ವರಿಷ್ಠಾಧಿಕಾರಿಗಳು ಈ ಬಗ್ಗೆ ಸೂಕ್ತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ದಾಖಲೆಗಳಿಲ್ಲದ ವಾಹನಗಳದ್ದೇ ಚಿಂತೆ:ಪೊಲೀಸರು ವಶಪಡಿಸಿಕೊಂಡಿರುವ ವಾಹನಗಳ ಪೈಕಿ ದಾಖಲೆಗಳಿಲ್ಲದ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಇವನ್ನು ಇನ್ನಷ್ಟು ದಿನಗಳವರೆಗೆ ಪೊಲೀಸರೇ ಕಾಯಬೇಕಾಗಿದೆ. ಹಲವು ಕಳವು ಪ್ರಕರಣಗಳು ಕೂಡ ಬಯಲಾಗಬಹುದು.
ಕರೊನಾ ವಿರುದ್ಧದ ಹೋರಾಟಕ್ಕೆ ಈ ಅಸ್ತ್ರ ಬಳಸಿ; ಸರ್ಕಾರಿ ನೌಕರರಿಗೆ ಕೇಂದ್ರದಿಂದಲೇ ಬಂತು ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 11 =
Remember me
