ಬೆಂಗಳೂರು:ಇಂದು ಬೆಂಗಳೂರಿನಲ್ಲಿ ಖಾಸಗಿ ವಾಣಿಜ್ಯ ವಾಹನಗಳ ಸಂಘಟನೆಗಳು ಮುಷ್ಕರ ನಡೆಸುತ್ತಿದ್ದು, ಇದರ ಪರಿಣಾಮವಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಸದ್ಯ ಮೆಟ್ರೋ ಹಾಗೂ ಬಿಎಂಟಿಸಿ ಬಸ್‍ಗಳ ಮೇಲೆ ಭಾರಿ ಹೆಚ್ಚಿನ ಒತ್ತಡ ಬಿದ್ದಿದ್ದು, ಮೆಜೆಸ್ಟಿಕ್‍ನಲ್ಲಿ ಬಿಎಂಟಿಸಿ ಬಸ್‍ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದೆ. ಇನ್ನು ಮೆಟ್ರೋದಲ್ಲೂ ಹೆಚ್ಚಿನ ಜನ ಸಂಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಎಂಆರ್‍ಸಿಎಲ್, ಪ್ರತಿ 5 ನಿಮಿಷಕ್ಕೆ ಒಂದರಂತೆ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಮುಷ್ಕರದ ಪರಿಣಾಮವಾಗಿ ಏರ್ ಪೋರ್ಟ್ ಮೂಲಕ ನಗರಕ್ಕೆ ಬರುತ್ತಿರುವ ಪ್ರಯಾಣಿಕರಿಗೂ ಬಿಸಿ ತಟ್ಟಿದೆ. ನಿನ್ನೆ ,ಮಧ್ಯರಾತ್ರಿಯಿಂದಲೇ ಏರ್ಪೋರ್ಟ್‍ನಲ್ಲಿ ಟ್ಯಾಕ್ಸಿಗಳ ಸಂಚಾರ ವಿರಳವಾಗಿತ್ತು. ಏರ್ಪೋರ್ಟ್‍ನ ಕೆಎಸ್ಟಿಡಿಸಿ ಟ್ಯಾಕ್ಸಿಗಳು ರಾತ್ರಿಯಿಂದಲೇ ಮುಷ್ಕರಕ್ಕೆ ಬೆಂಬಲ ನೀಡಿದ್ದರ ಪರಿಣಾಮವಾಗಿ ಕಡಿಮೆ ಸಂಖ್ಯೆಯಲ್ಲಿ  ಸಂಚಾರ ಕಂಡುಬರುತ್ತಿದೆ. ಆದರೂ ಬಂದ್ ನಡುವೆ  ಏರ್ಪೋರ್ಟ್‍ಗೆ ಕೆಲ ಟ್ಯಾಕ್ಸಿ ಚಾಲಕರು ಬಂದು ನಿತ್ಯದಂತೆ ಸಂಚಾರ ನಡೆಸುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಇನ್ನು ಮೆಜೆಸ್ಟಿಕ್ ಕೆಎಸ್ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಆಟೋಗಳ ಸಂಖ್ಯೆಯಲ್ಲೂ ಇಳಿಮುಖವಾಗಿದ್ದು ಈ ದಿನದ ಮುಷ್ಕರಕ್ಕೆ ಪೂರ್ಣ ಬೆಂಬಲ ನೀಡಲು ಚಾಲಕರು ತೀರ್ಮಾನಿಸಿರುವ ಹಾಗಿದೆ. ಆಟೋಗಳ ಸಂಖ್ಯೆ ಕಡಿಮೆ ಹಿನ್ನೆಲೆ ಬಿಎಂಟಿಸಿ ಬಸ್‍ಗಳತ್ತ ಜನರು ಮುಖ ಮಾಡುತ್ತಿದ್ದಾರೆ.
ಬೇಡಿಕೆಯ ಈಡೇರಿಸದ ಸಾರಿಗೆ ಇಲಾಖೆ ವಿರುದ್ಧ ಖಾಸಗಿ ‌ಸಾರಿಗೆ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಮನವಿ ಮಾಡಿ ಫಲ ಕಾಣದ ಹಿನ್ನೆಲೆಯಲ್ಲಿ ಚಾಲಕರ ಒಕ್ಕೂಟ ಬಂದ್ ಮೊರೆಹೋಗಿದೆ ಎನ್ನುತ್ತಿದೆ. ಸದ್ಯ 40ಕ್ಕೂ ಅಧಿಕ ಖಾಸಗಿ ಸಾರಿಗೆ ಸಂಘಟನೆಗಳು ಸೇರಿ ಬೆಂಗಳೂರು ಬಂದ್ ಮಾಡುತ್ತಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ರ್‍ಯಾಲಿ ನಡೆಯಲಿದ್ದು ಈ ಸಂದರ್ಭದಲ್ಲಿ 8ರಿಂದ 10 ಸಾವಿರ ಚಾಲಕರು, ಮಾಲೀಕರು ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
