ಬಳ್ಳಾರಿ:ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿನ ಗಲಭೆಗೆ ಸಂಬಂಧಪಟ್ಟ 80 ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ನಗರದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಭಾರೀ ಪೊಲೀಸ್ ಬಂದೋಬಸ್ತ್​ನೊಂದಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ನಗರಕ್ಕೆ ಕರೆದುಕೊಂಡು ಬರಲಾಗಿದೆ. ಬಳ್ಳಾರಿ ಜೈಲಿಗೆ ಕರೆದುಕೊಂಡು ಬರುವ ಮುನ್ನ ಎಲ್ಲ ಆರೋಪಿಗಳನ್ನೂ ಕರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಎಲ್ಲರದ್ದೂ ನೆಗೆಟಿವ್ ವರದಿ ಬಂದಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿರಿನಾನು ಹುಟ್ಟಿ ಬೆಳೆದ ಮನೆಯನ್ನು ಸುಟ್ಟು‌ ಹಾಕಿದ್ದಾರೆ… ಗಲಭೆಕೋರರಿಗೆ ಕಠಿಣ ಶಿಕ್ಷೆ ಆಗಲೇ ಬೇಕು: ಅಖಂಡ ಶ್ರೀನಿವಾಸಮೂರ್ತಿ
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಆ.11ರ ರಾತ್ರಿ ಬೆಂಗಳೂರಿನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಉದ್ರಿಕ್ತ ಗುಂಪು ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ, ಪೊಲೀಸ್​ ಠಾಣೆಗೂ ಬೆಂಕಿ ಇಟ್ಟು ದಾಂಧಲೆ ನಡೆಸಿತ್ತು. ಸಾರ್ವಜನಿಕರ, ಪೊಲೀಸರ ವಾಹನಕ್ಕೂ ಬೆಂಕಿ ಇಟ್ಟು ಮನಸೋಇಚ್ಛೆ ಹಲ್ಲೆ ನಡೆಸಿತ್ತು.
ಡಿಜೆ ಹಳ್ಳಿ ಗಲಭೆ ಪ್ರಕರಣದ ಮಾಸ್ಟರ್​ ಮೈಂಡ್ ಕಲೀಲ್ ಪಾಷ ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 4 =
Remember me
