ಬೆಂಗಳೂರು:ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದ್ದು, ಆ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ವೇಳೆ ಅಕ್ರಮದಲ್ಲಿ ತೊಡಗಿದ್ದರು ಎಂಬುದಾಗಿ ಆರೋಪ ಬಂದಿದ್ದು, ನಿನ್ನೆಯಷ್ಟೇ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸುಮಾರು ಹತ್ತು ಗಂಟೆಗಳ ಕಾಲ ಅವರ ವಿಚಾರಣೆ ನಡೆಸಲಾಗಿತ್ತು.
ಭೂವ್ಯಾಜ್ಯ ಸಂಬಂಧ ಮಂಜುನಾಥ್ ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇವರ ವಿರುದ್ಧ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಇವರನ್ನು ಮೂರನೇ ಆರೋಪಿಯಾಗಿ ಕೇಸು ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಕನ್ಹಯ್ಯ ಲಾಲ್​ ಭೀಕರ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ..
ಇಂದು ಮಂಜುನಾಥ್ ಅವರನ್ನು ಇಂಟೆಗ್ರೇಟೆಡ್​ ಚೈಲ್ಡ್​ ಪ್ರೊಟೆಕ್ಷನ್​ ಸ್ಕೀಮ್​ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಇವರು ಇದಕ್ಕೂ ಮುನ್ನ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.
2 ಬಸ್​ಗಳ ಮಧ್ಯೆ ಭೀಕರ ಅಪಘಾತ: ಒಬ್ಬ ಚಾಲಕನಿಗೆ ಗಂಭೀರ ಗಾಯ, 50ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು..

‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × three =
Remember me
