ಬೆಂಗಳೂರು:ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸಮುದಾಯ ಮಳೆ ಕೋಯ್ಲು (ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್) ಪ್ರಾರಂಭಿಸಲು ಚಿಂತನೆ ನಡೆಸಿದೆ.
ಬೆಂಗಳೂರು ನಗರದ ಬೃಹತ್ ಕಟ್ಟಡಗಳಲ್ಲಿ ಮಳೆ ನೀರು ಕೋಯ್ಲು ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಕಟ್ಟಡಗಳಲ್ಲಿನ ಜಾಗದ ಕೊರತೆ ಹಾಗೂ ನಿರ್ಲಕ್ಷದಿಂದ ಇದರ ಸರಿಯಾದ ಅನುಷ್ಠಾನ ಸಾಧ್ಯವಾಗಿಲ್ಲ. ಬಹುತೇಕ ಕಡೆಗಳಲ್ಲಿ ಕೇವಲ ಅಗತ್ಯ ಅನುಮತಿ ಪಡೆದುಕೊಳ್ಳಲು ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿದ್ದು, ಮಳೆ ನೀರನ್ನ ಸಂಗ್ರಹಿಸಿ ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರಿಂದ ಮಳೆಗಾಗಲದಲ್ಲಿ ಒಳಚರಂಡಿ ವ್ಯವಸ್ಥೆ ಒತ್ತಡಕ್ಕೆ ಒಳಗಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಅಲ್ಲದೇ, ಇದರಿಂದ ಅಮೂಲ್ಯ ನೀರು ವ್ಯರ್ಥವಾಗಿ ಚರಂಡಿಪಾಲಾಗುತ್ತಿದೆ. ನೀರು ವ್ಯರ್ಥವಾಗದಂತೆ ಅಮೂಲ್ಯ ಮಳೆ ನೀರನ್ನ ಸಂಗ್ರಹಿಸಿ ಅದನ್ನ ಅಂತರ್ಜಲ ವೃದ್ದಿಗೆ ಬಳಸಿಕೊಳ್ಳಲು ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್ ಯೋಜನೆಯನ್ನು ಜಲಮಂಡಳಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕೆರೆಗಳಿಗೆ ನೀರು ಹರಿಸುವ ಕಾರ್ಯ:ಅಪಾರ ಪ್ರಮಾಣದಲ್ಲಿ ಹರಿದು ಹೋಗುವ ಮಳೆ ನೀರನ್ನ ಸಮರ್ಪಕವಾದ ವ್ಯವಸ್ಥೆಯ ಮೂಲಕ ಕೆರೆಗಳಿಗೆ ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಅದರಲ್ಲೂ ಕೆರೆಗಳಿಂದ 500 ಮೀಟರ್ ಸುತ್ತಳತೆಯಲ್ಲಿರುವ ಅಪಾರ್ಟ್‌ಮೆಂಟ್‌ಗಳು, ಸಾರ್ವಜನಿಕ ಪ್ರದೇಶಗಳು ಹಾಗೂ ದೊಡ್ಡ ಕಟ್ಟಡಗಳಿಂದ ಪೈಪ್‌ಲೈನ್ ಮೂಲಕ ಕೆರೆಗಳಿಗೆ ನೇರವಾಗಿ ಮಳೆ ನೀರನ್ನ ತುಂಬಿಸುವ ಯೋಜನೆ ರೂಪಿಸಲಾಗುತ್ತಿದೆ. ಇದರಿಂದ ಅಂತರ್ಜಲ ವೃದ್ದಿಗೂ ಸಹಕಾರಿಯಾಗಲಿದೆ. ಮೊದಲ ಹಂತದಲ್ಲಿ ವರ್ತೂರು, ಬೆಳ್ಳಂದೂರು ಭಾಗದಲ್ಲಿ ಈ ಯೋಜನೆಯನ್ನ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 5 =
Remember me
