ಬೆಂಗಳೂರು:ನಗರದ ಹೊರವಲಯದ ಆನೇಕಲ್​​ನಲ್ಲಿ ಆರು ಮಂದಿ ರೋಗಿಗಳಲ್ಲಿ ಝೀಕಾ ವೈರಸ್ ​​​ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಇದನ್ನೂ ಓದಿ:ಡೆಹ್ರಾಡೂನ್: ಬಸ್​ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ
ಆರು ಮಂದಿ ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.
ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಆರು ಮಂದಿಗೆ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಘೆ ಸೋಂಕು ಪತ್ತೆ ವೇಳೆ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಸದ್ಯ ಎಲ್ಲರೂ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ರವಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಝೀಕಾ ಸೋಂಕು ಪತ್ತೆಯಾದ ಬಗ್ಗೆ, ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಮಾತನಾಡಿ, ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಝೀಕಾ ವೈರಸ್​ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ. ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಜುಲ್ಫಿಕರ್ ಬಿಜೆಪಿಗೆ ಸೇರ್ಪಡೆ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 + five =
Remember me
