ಬೆಂಗಳೂರು:ಇದೀಗ ಸಿಸಿಬಿ ಪೊಲೀಸರಿಂದ ಎರಡು ಠಾಣಾ ವ್ಯಾಪ್ತಿಯಲ್ಲಿ ದಾಳಿ ದಾಳಿ ನಡೆದಿದ್ದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ.
ಕೆಂಗೇರಿ ಹಾಗೂ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದ್ದ ಸಿಸಿಬಿ ಅಧಿಕಾರಿಗಳು ಬಾಂಗ್ಲಾದಿಂದ ಅಕ್ರಮವಾಗಿ ಬಂದು ನೆಲೆಸಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ತನ್ವೀರ್ ಮಂಡಲ್,ಅಖ್ತರ್ ಮಂಡಲ್, ಇಲಾಹಿ,ಬಿಸ್ತ್ವಿ ಸೇರಿದಂತೆ 12 ಮಂದಿಯನ್ನು ಬಂಧಿಸಿದ್ದಾರೆ.
ಇವರು ಕೆಂಗೇರಿಯ ವಿನಾಯಕನಗರ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ಬಾಡಿಗೆ ಮನೆಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅಕ್ರಮ ವಲಸಿಗರು, ಯುವತಿಯರನ್ನ ಬೆಂಗಳೂರಿಗೆ ಅಕ್ರಮವಾಗಿ ಕರೆತಂದು ವೇಶ್ಯಾವಾಟಿಕೆ ಮಾಡುತ್ತಿದ್ದರು. ಸದ್ಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ 12 ಆರೋಪಿಗಳ ಬಳಿಯಲ್ಲಿ ಭಾರತದ ಅಧಾರ್ ಕಾರ್ಡ್ ಗಳು ಪತ್ತೆ ಆಗಿವೆ. ಅದಲ್ಲದೆ ಆರೋಪಿಗಳ ಬಳಿ ಬಾಂಗ್ಲಾ ಕರೆನ್ಸಿ, ಬಾಂಗ್ಲಾದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಪಡೆದಿರುವ ದಾಖಲೆ ಪತ್ತೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
